Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 10:9 - ಪರಿಶುದ್ದ ಬೈಬಲ್‌

9 ಮುಂಜಾನೆ, ಯೇಹು ಹೊರಗೆ ಬಂದು ಜನರ ಮುಂದೆ ನಿಂತು ಅವರಿಗೆ, “ನೀವು ನಿರಪರಾಧಿಗಳು. ನಾನಾದರೋ ನನ್ನ ಒಡೆಯನ ಮೇಲೆ ಒಳಸಂಚು ಮಾಡಿದವನು. ನಾನು ಅವನನ್ನು ಕೊಂದೆನು. ಆದರೆ ಅಹಾಬನ ಮಕ್ಕಳನ್ನೆಲ್ಲ ಕೊಂದವರು ಯಾರು? ನೀವು ಅವರನ್ನು ಕೊಂದಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು, “ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ - ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 10:9
7 ತಿಳಿವುಗಳ ಹೋಲಿಕೆ  

ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.


ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ.


ನಾನು ಇಲ್ಲಿದ್ದೇನೆ. ನಾನು ಯಾವ ತಪ್ಪುಗಳನ್ನಾದರೂ ಮಾಡಿದ್ದರೆ, ನೀವು ಯೆಹೋವನಿಗೆ ಮತ್ತು ಆತನು ಆರಿಸಿರುವ ರಾಜನಿಗೆ ಅವುಗಳನ್ನು ಹೇಳಲೇಬೇಕು. ನಾನು ಬೇರೊಬ್ಬರ ಹಸುವನ್ನಾಗಲಿ ಕತ್ತೆಯನ್ನಾಗಲಿ ಕದ್ದಿರುವೆನೇ? ನಾನು ಯಾರನ್ನಾದರೂ ನೋಯಿಸಿರುವೆನೇ? ವಂಚಿಸಿರುವೆನೇ? ನಾನು ತಪ್ಪುಮಾಡಲು ಯಾರಿಂದಲಾದರೂ ಹಣವನ್ನಾಗಲೀ ಪಾದರಕ್ಷೆಗಳನ್ನಾಗಲೀ ತೆಗೆದುಕೊಂಡಿರುವೆನೇ? ನಾನು ಈ ಕಾರ್ಯಗಳನ್ನು ಮಾಡಿರುವುದಾದರೆ ತಿಳಿಸಿ, ಅವುಗಳನ್ನು ಸರಿಪಡಿಸುತ್ತೇನೆ” ಎಂದು ಹೇಳಿದನು.


ನಂತರ ಯೇಹು ಈ ನಾಯಕರಿಗೆ ಎರಡನೆಯ ಪತ್ರವನ್ನು ಬರೆದನು. ಯೇಹುವು, “ನೀವು ನನಗೆ ಬೆಂಬಲ ಕೊಡುವುದಾದರೆ ಮತ್ತು ವಿಧೇಯರಾಗಿರುವುದಾದರೆ ಅಹಾಬನ ಮಕ್ಕಳ ತಲೆಗಳನ್ನು ಕತ್ತರಿಸಿ ಹಾಕಿ. ನಾಳೆ ಇದೇ ಸಮಯಕ್ಕೆ ಇಜ್ರೇಲಿಗೆ ನನ್ನ ಬಳಿಗೆ ಅವುಗಳನ್ನು ತನ್ನಿ.” ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಅವರು ತಮ್ಮ ಪಾಲಕರಾದ ನಗರದ ನಾಯಕರ ಬಳಿಯಲ್ಲಿದ್ದರು.


ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು. ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ಆ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು.


ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋಜಾಬಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು