Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:10 - ಪರಿಶುದ್ದ ಬೈಬಲ್‌

10 ಸೇನಾಧಿಪತಿಗಳಿಗೆ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಯಾಜಕನು ಕೊಟ್ಟನು. ರಾಜನಾದ ದಾವೀದನು ಯೆಹೋವನ ಆಲಯದಲ್ಲಿ ಈ ಬರ್ಜಿಗಳನ್ನು ಮತ್ತು ಗುರಾಣಿಗಳನ್ನು ಇಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:10
7 ತಿಳಿವುಗಳ ಹೋಲಿಕೆ  

ಹದದೆಜೆರನ ಸೇವಕರಿಗೆ ಸೇರಿದ ಚಿನ್ನದ ಗುರಾಣಿಗಳನ್ನು ದಾವೀದನು ವಶಪಡಿಸಿಕೊಂಡನು. ದಾವೀದನು ಅವುಗಳನ್ನು ಜೆರುಸಲೇಮಿಗೆ ತಂದನು.


ಹದದೆಜರನ ಸೇನಾಧಿಪತಿಗಳು ಉಪಯೋಗಿಸುತ್ತಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಜೆರುಸಲೇಮಿಗೆ ತಂದನು.


ಯೆಹೋವದೇವರ ಆಲಯಕ್ಕೆ ಸೊಲೊಮೋನನು ಮಾಡಬೇಕಾಗಿದ್ದ ಕೆಲಸವೆಲ್ಲವೂ ಮುಗಿಯಿತು. ದಾವೀದನು ದೇವಾಲಯಕ್ಕಾಗಿ ಕೊಟ್ಟಿದ್ದ ವಸ್ತುಗಳನ್ನೆಲ್ಲಾ ಸೊಲೊಮೋನನು ತಂದಿರಿಸಿದನು; ಬೆಳ್ಳಿಬಂಗಾರಗಳಿಂದ ಮಾಡಿದ ಸಾಮಾನುಗಳನ್ನು ಸೊಲೊಮೋನನು ದೇವಾಲಯದ ಭಂಡಾರದ ಕೋಣೆಗಳಲ್ಲಿ ಇಡಿಸಿದನು.


ಯಾಜಕನು, “ಇಲ್ಲಿರುವುದು ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವೊಂದೇ. ಏಲಾ ಕಣಿವೆಯಲ್ಲಿ ನೀನು ಅವನನ್ನು ಕೊಂದು ಅವನಿಂದ ನೀನು ಕಿತ್ತುಕೊಂಡ ಖಡ್ಗವೇ ಅದು. ಆ ಖಡ್ಗವನ್ನು ಬಟ್ಟೆಯಲ್ಲಿ ಸುತ್ತಿ ಎಫೋದಿನ ಹಿಂಭಾಗದಲ್ಲಿ ಇಟ್ಟಿದೆ. ನಿನಗೆ ಬೇಕಿದ್ದರೆ ಅದನ್ನು ತೆಗೆದುಕೋ” ಎಂದು ಉತ್ತರಿಸಿದನು. ದಾವೀದನು, “ಅದನ್ನು ನನಗೆ ಕೊಡು. ಗೊಲ್ಯಾತನ ಖಡ್ಗಕ್ಕೆ ಸಮನಾದ ಬೇರೊಂದು ಖಡ್ಗವಿಲ್ಲ!” ಎಂದನು.


ಈ ಕಾವಲುಗಾರರು ಆಲಯದ ಬಲಗಡೆಯ ಮೂಲೆಯಿಂದ ಎಡಗಡೆಯ ಮೂಲೆಯವರೆಗೆ ತಮ್ಮ ಕೈಗಳಲ್ಲಿ ಆಯುಧಗಳನ್ನು ಹಿಡಿದುಕೊಂಡು ನಿಂತರು. ರಾಜನು ಆಲಯದೊಳಕ್ಕೆ ಹೋದಾಗ ಅವರು ಅವನ ಸುತ್ತಲೂ, ಯಜ್ಞವೇದಿಕೆಯ ಮತ್ತು ಆಲಯದ ಸುತ್ತಲೂ ನಿಂತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು