2 ಅರಸುಗಳು 11:15 - ಪರಿಶುದ್ದ ಬೈಬಲ್15 ಯಾಜಕನಾದ ಯೆಹೋಯಾದಾವನು ಸೈನಿಕರ ಮೇಲ್ವಿಚಾರಕರಾದ ಸೇನಾಧಿಪತಿಗಳಿಗೆ ಆಜ್ಞಾಪಿಸಿದನು. ಯೆಹೋಯಾದಾವನು ಅವರಿಗೆ, “ಅತಲ್ಯಳನ್ನು ಆಲಯದ ಆವರಣದಿಂದ ಹೊರಗೆ ತೆಗೆದುಕೊಂಡು ಹೋಗಿ. ಅವಳ ಹಿಂಬಾಲಕರು ಯಾರೇ ಆಗಿದ್ದರೂ ಕೊಂದುಬಿಡಿ. ಆದರೆ ಅವರನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ ಹೊರಗೆ ಕರಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |
ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.