2 ಅರಸುಗಳು 11:18 - ಪರಿಶುದ್ದ ಬೈಬಲ್18 ಆಗ ಜನರೆಲ್ಲರೂ ಸುಳ್ಳುದೇವರಾದ ಬಾಳನ ಗುಡಿಗೆ ಹೋಗಿ ಬಾಳನ ವಿಗ್ರಹವನ್ನೂ ಮತ್ತು ಅವನ ಯಜ್ಞವೇದಿಕೆಯನ್ನೂ ಚೂರುಚೂರು ಮಾಡಿದರು. ಬಾಳನ ಯಾಜಕನಾದ ಮತ್ತಾನನನ್ನು ಜನರು ಯಜ್ಞವೇದಿಕೆಯ ಎದುರಿನಲ್ಲಿಯೇ ಕೊಂದುಹಾಕಿದರು. ಯಾಜಕನಾದ ಯೆಹೋಯಾದಾವನು ಯೆಹೋವನ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ವೇದಿಗಳ ಮುಂದೆಯೇ ಕೊಂದು ದೇವಸ್ಥಾನವನ್ನೂ ಅದರಲ್ಲಿದ್ದ ವೇದಿ ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.