Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:2 - ಪರಿಶುದ್ದ ಬೈಬಲ್‌

2 ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದರೆ ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಅತಲ್ಯಳಿಂದ ಹತರಾಗಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯರೊಡನೆ ಅವನನ್ನು ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬಳೆಂಬಾಕೆಯು ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗನಾದ ಯೆಹೋವಾಷನನ್ನು ಹತವಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:2
24 ತಿಳಿವುಗಳ ಹೋಲಿಕೆ  

ಅವನು, “ದಕ್ಷಿಣಕ್ಕೆ ಅಭಿಮುಖವಾಗಿದ್ದ ಕೋಣೆಯು, ಆಲಯದಲ್ಲಿ ಯಾಜಕ ಉದ್ಯೋಗ ಮಾಡುತ್ತಿರುವ ಯಾಜಕರಿಗಾಗಿ.


“ಯೆರೆಮೀಯನೇ, ರೇಕಾಬನ ಕುಟುಂಬದವರಲ್ಲಿಗೆ ಹೋಗು. ಅವರನ್ನು ಯೆಹೋವನ ಆಲಯದ ಒಂದು ಪಕ್ಕದ ಕೋಣೆಗೆ ಕರೆದು, ಕುಡಿಯುವದಕ್ಕೆ ದ್ರಾಕ್ಷಾರಸವನ್ನು ಕೊಡು.”


ಅವರನ್ನು ತ್ಯಜಿಸಬಹುದೇನೋ! ಯಾಕೋಬನ ಸಂತಾನದವರನ್ನು ತ್ಯಜಿಸಿ ದಾವೀದನ ವಂಶದವರು ಅಬ್ರಹಾಮ, ಇಸಾಕ ಮತ್ತು ಯಾಕೋಬರ ಸಂತತಿಯವರನ್ನು ಆಳದಂತೆ ಮಾಡಬಹುದೇನೋ! ಆದರೆ ದಾವೀದನು ನನ್ನ ಸೇವಕ. ನಾನು ಅವರಿಗೆ ಕರುಣೆ ತೋರೇ ತೋರುವೆನು; ಅವರಿಗೆ ಒಳ್ಳೆಯದಾಗುವಂತೆ ಮಾಡೇ ಮಾಡುವೆನು.”


ನೀವು ದಾವೀದನ ಮತ್ತು ಲೇವಿಯರ ಜೊತೆ ನಾನು ಮಾಡಿಕೊಂಡ ಒಡಂಬಡಿಕೆಯನ್ನೂ ಬದಲಾಯಿಸಬಹುದು. ಆಗ ದಾವೀದನ ವಂಶದವರು ರಾಜರಾಗಲಾರರು ಮತ್ತು ಲೇವಿಯರ ವಂಶದವರು ಯಾಜಕರಾಗಲಾರರು.


ಯೆಹೋವನು ಹೀಗೆನ್ನುತ್ತಾನೆ: “ಯಾವಾಗಲೂ ದಾವೀದನ ವಂಶದವನೊಬ್ಬನು ಸಿಂಹಾಸನಾರೂಢನಾಗಿದ್ದುಕೊಂಡು ಇಸ್ರೇಲರನ್ನು ಆಳುವನು.


ನಾನು ಈ ಪಟ್ಟಣವನ್ನು ರಕ್ಷಿಸಿ ಕಾಪಾಡುವೆನು. ನನಗೋಸ್ಕರವಾಗಿಯೇ ಇದನ್ನು ಮಾಡುವೆನು. ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಮಾಡುವೆನು.”


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಆದರೆ ಅರಸನಾದ ಯೋರಾಮನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ಅಡಗಿಸಿಟ್ಟಳು. ಆಕೆಯು ಅವನನ್ನೂ ಅವನ ದಾದಿಯನ್ನೂ ಒಳಗಿನ ಕೋಣೆಯಲ್ಲಿ ಅಡಗಿಸಿಟ್ಟಳು. ಆಕೆಯು ಯಾಜಕನಾದ ಯೆಹೋಯಾದನ ಹೆಂಡತಿಯಾಗಿದ್ದಳು. ಆಕೆಯು ಸಹ ಅಹಜ್ಯನ ಸೋದರಿ. ಯೆಹೋವಾಷನು ಅತಲ್ಯಳಿಗೆ ಸಿಗದೆಹೋದುದರಿಂದ ಬದುಕಿಕೊಂಡನು.


ಯೆಹೋವಾಷನು ರಾಜನಾದಾಗ ಅವನಿಗೆ ಏಳು ವರ್ಷ ವಯಸ್ಸಾಗಿತ್ತು.


ಆದರೆ ಯೆಹೋವನು ತನ್ನ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದುದರಿಂದ ಯೆಹೂದವನ್ನು ನಾಶಗೊಳಿಸಲಿಲ್ಲ. ಯಾವಾಗಲೂ ದಾವೀದನ ಕುಟುಂಬದ ಒಬ್ಬನು ರಾಜನಾಗಿರುತ್ತಾನೆಂದು ಯೆಹೋವನು ವಾಗ್ದಾನ ಮಾಡಿದ್ದನು.


ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದನು. ಅಹಾಬನ ಮಗನಾದ ಯೋರಾಮನು ಇಸ್ರೇಲಿನ ರಾಜನಾಗಿದ್ದ ಐದನೆಯ ವರ್ಷದಲ್ಲಿ ಯೆಹೋರಾಮನು ಆಳಲಾರಂಭಿಸಿದನು.


ಸೊಲೊಮೋನನು ದೇವಾಲಯದ ಸುತ್ತಲಿನ ಕೊಠಡಿಗಳ ನಿರ್ಮಾಣವನ್ನೂ ಮುಗಿಸಿದನು. ಒಂದೊಂದು ಅಂತಸ್ತು ಏಳೂವರೆ ಅಡಿಗಳಷ್ಟು ಎತ್ತರವಾಗಿತ್ತು. ಈ ಕೊಠಡಿಗಳ ದೇವದಾರು ತೊಲೆಗಳು ದೇವಾಲಯವನ್ನು ಸ್ಪರ್ಶಿಸುತ್ತ್ತಿದ್ದವು.


ಕೆಳಅಂತಸ್ತಿನ ಕೊಠಡಿಗಳ ಪ್ರವೇಶವು ದೇವಾಲಯದ ದಕ್ಷಿಣದ ಕಡೆಗಿತ್ತು. ಎರಡನೆಯ ಅಂತಸ್ತಿನ ಕೊಠಡಿಗಳಿಗೆ ಹೋಗುವ ಮೆಟ್ಟಿಲುಗಳು ಒಳಗಡೆಯಿದ್ದು, ಅಲ್ಲಿಂದ ಮೂರನೆಯ ಅಂತಸ್ತಿನ ಕೊಠಡಿಗಳಿಗೂ ಹೋಗಬಹುದಾಗಿತ್ತು.


ನೈಲ್ ನದಿಯು ಕಪ್ಪೆಗಳಿಂದ ತುಂಬಿ ಹೋಗುವುದು. ಕಪ್ಪೆಗಳು ನದಿಯಿಂದ ಬಂದು ನಿಮ್ಮ ಮನೆಗಳನ್ನು ಪ್ರವೇಶಿಸುವವು; ನಿಮ್ಮ ಮಲಗುವ ಕೋಣೆಯಲ್ಲಿಯೂ ನಿಮ್ಮ ಹಾಸಿಗೆಗಳಲ್ಲಿಯೂ ನಿಮ್ಮ ಅಧಿಕಾರಿಗಳ ಮನೆಗಳಲ್ಲಿಯೂ ನಿಮ್ಮ ಒಲೆಗಳಲ್ಲಿಯೂ ನೀರಿನ ಜಾಡಿಗಳಲ್ಲಿಯೂ ಹಿಟ್ಟುನಾದುವ ತಟ್ಟೆಗಳಲ್ಲಿಯೂ ಇರುವವು;


ಅಬೀಮೆಲೆಕನು ಒಫ್ರದಲ್ಲಿದ್ದ ತನ್ನ ತಂದೆಯ ಮನೆಗೆ ಹೋದನು. ಅಬೀಮೆಲೆಕನು ತನ್ನ ಸಹೋದರರ ಕೊಲೆ ಮಾಡಿದನು. ಅಬೀಮೆಲೆಕನು ತನ್ನ ತಂದೆಯಾದ ಯೆರುಬ್ಬಾಳನ ಎಪ್ಪತ್ತು ಮಕ್ಕಳನ್ನು ಕೊಂದನು. ಅವನು ಅವರೆಲ್ಲರನ್ನು ಏಕಕಾಲದಲ್ಲಿ ಕೊಂದನು. ಆದರೆ ಯೆರುಬ್ಬಾಳನ ಕಿರಿಯ ಮಗನು ಅಡಗಿಕೊಂಡಿದ್ದು ತಪ್ಪಿಸಿಕೊಂಡನು. ಆ ಕಿರಿಯ ಮಗನ ಹೆಸರು ಯೋತಾಮ.


ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.


ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದ ಚಿಬ್ಯಳು ಯೆಹೋವಾಷನ ತಾಯಿ.


ಆದರೆ ಆ ಕಾಲಕ್ಕೆ ಹದದನಿನ್ನೂ ಚಿಕ್ಕ ಬಾಲಕನಾಗಿದ್ದನು. ಆದ್ದರಿಂದ ಹದದನು ಈಜಿಪ್ಟಿಗೆ ಓಡಿಹೋದನು. ಅವನ ತಂದೆಯ ಕೆಲವು ಜನ ಸೇವಕರೂ ಅವನೊಡನೆ ಹೋದರು.


ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.


ರಾಜನಾದ ಯೆಹೋಯಾಕೀಮನು ಲಿಪಿಕಾರನಾದ ಬಾರೂಕನನ್ನು ಮತ್ತು ಪ್ರವಾದಿಯಾದ ಯೆರೆಮೀಯನನ್ನು ಬಂಧಿಸಬೇಕೆಂದು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶೆಲೆಮ್ಯ ಇವರಿಗೆ ಆಜ್ಞೆಯನ್ನು ಕೊಟ್ಟನು. ಆದರೆ ಅವರಿಂದ ಬಾರೂಕನನ್ನು ಮತ್ತು ಯೆರೆಮೀಯನನ್ನು ಹುಡುಕಲಾಗಲಿಲ್ಲ. ಯಾಕೆಂದರೆ ಯೆಹೋವನು ಅವರನ್ನು ಬಚ್ಚಿಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು