2 ಅರಸುಗಳು 11:3 - ಪರಿಶುದ್ದ ಬೈಬಲ್3 ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಿ ಕೊಂಡು ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಆ ಆರು ವರ್ಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೀಗೆ ಅವನು ಅತಲ್ಯಳಿಂದ ಹತವಾಗದಂತೆ ತಪ್ಪಿಸಲ್ಪಟ್ಟು ಆರು ವರುಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಯೆಹೋವನ ಆಲಯದಲ್ಲಿದ್ದನು. ಈ ಆರು ವರುಷಗಳಲ್ಲಿ ಅತಲ್ಯಳೇ ದೇಶವನ್ನು ಆಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು. ಅಧ್ಯಾಯವನ್ನು ನೋಡಿ |
ಯೆಹೋಷೆಬಳು ರಾಜನಾದ ಯೋರಾಮನ ಮಗಳಾಗಿದ್ದಳು ಮತ್ತು ಅಹಜ್ಯನ ಸೋದರಿಯಾಗಿದ್ದಳು. ಯೆಹೋವಾಷನು ರಾಜನ ಮಕ್ಕಳಲ್ಲಿ ಒಬ್ಬನಾಗಿದ್ದನು. ಅತಲ್ಯಳು ಇತರ ಮಕ್ಕಳನ್ನು ಕೊಲ್ಲುವಾಗ ಯೆಹೋಷೆಬಳು ಯೆಹೋವಾಷನನ್ನು ತೆಗೆದುಕೊಂಡು ಹೋದಳು. ಅವಳು ಯೆಹೋವಾಷನನ್ನು ಮತ್ತು ಅವನ ದಾದಿಯನ್ನು ತನ್ನ ಮಲಗುವ ಕೊಠಡಿಯಲ್ಲಿ ಅಡಗಿಸಿದಳು. ಯೆಹೋವಾಷನನ್ನು ಅವನ ದಾದಿಯು ಮತ್ತು ಯೆಹೋಷೆಬಳು ಅತಲ್ಯಳಿಂದ ತಪ್ಪಿಸಿ ಅಡಗಿಸಿಟ್ಟರು. ಈ ರೀತಿ ಯೆಹೋವಾಷನನ್ನು ಕೊಲ್ಲಲಾಗಲಿಲ್ಲ.
ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.