Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:4 - ಪರಿಶುದ್ದ ಬೈಬಲ್‌

4 ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:4
24 ತಿಳಿವುಗಳ ಹೋಲಿಕೆ  

ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು.


ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಸಂಗತಿಗಳಿಗೆಲ್ಲ ಸೇನಾಧಿಪತಿಗಳು ವಿಧೇಯರಾಗಿದ್ದರು. ಪ್ರತಿಯೊಬ್ಬ ಸೇನಾಧಿಪತಿಯೂ ತನ್ನ ಕಾವಲುಗಾರರನ್ನು ಅಂದರೆ ಸಬ್ಬತ್‌ದಿನದಂದು ಕಾಯಲು ಬರಬೇಕಾಗಿದ್ದ ಮತ್ತು ಸಬ್ಬತ್‌ದಿನದಂದು ಕೆಲಸದಿಂದ ಹೋಗಬೇಕಾಗಿದ್ದ ಸಿಪಾಯಿಗಳನ್ನು ಕರೆದೊಯ್ದನು. ಅವರೆಲ್ಲರೂ ಯಾಜಕನಾದ ಯೆಹೋಯಾದಾವನ ಹತ್ತಿರಕ್ಕೆ ಹೋದರು.


ತಮ್ಮ ಪೂರ್ವಿಕರು ಸೇವೆಮಾಡಿದ ದೇವರೊಂದಿಗೆ ಅಲ್ಲಿ ಅವರು ಒಡಂಬಡಿಕೆ ಮಾಡಿಕೊಂಡು ತಾವು ಪೂರ್ಣ ಹೃದಯದಿಂದಲೂ ಪೂರ್ಣ ಆತ್ಮದಿಂದಲೂ ಆತನ ಸೇವೆ ಮಾಡುವುದಾಗಿ ಪ್ರಮಾಣಮಾಡಿದರು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಆತನಿಗೆ ಪ್ರಮಾಣಮಾಡಿದರು.


ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು.


ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು.


“ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.”


ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.


ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.


ಒಟ್ಟು ಒಂದು ಸಾವಿರದ ಏಳುನೂರ ಅರವತ್ತು ಮಂದಿ ಯಾಜಕರಿದ್ದರು. ಇವರೆಲ್ಲರೂ ತಮ್ಮ ಕುಟುಂಬಗಳಿಗೆ ಪ್ರಧಾನರಾಗಿದ್ದರು. ದೇವಾಲಯದ ಕೆಲಸಕಾರ್ಯಗಳ ಜವಾಬ್ದಾರಿಕೆಯನ್ನು ಇವರು ಹೊತ್ತು ಕೊಂಡಿದ್ದರು.


ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.


ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ.


ಯೋನಾತಾನನು ಮತ್ತು ದಾವೀದನು ಯೆಹೋವನ ಸನ್ನಿಧಿಯಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು. ನಂತರ ಯೋನಾತಾನನು ಮನೆಗೆ ಹೋದನು. ದಾವೀದನು ಹೋರೆಷಿನಲ್ಲಿ ನೆಲೆಸಿದನು.


ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.


ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.


ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು.


ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು.


ನಂತರ ಯೆಹೋವಾಷ ಮತ್ತು ಯೆಹೋಷೆಬಳು ಯೆಹೋವನ ಆಲಯದಲ್ಲಿ ಅಡಗಿಕೊಂಡರು. ಯೆಹೋವಾಷನು ಆರು ವರ್ಷಗಳ ಕಾಲ ಅಡಗಿಕೊಂಡಿದ್ದನು. ಅತಲ್ಯಳು ಯೆಹೂದ ದೇಶವನ್ನು ಆಳಿದಳು.


ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.


ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.


ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು