Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 11:5 - ಪರಿಶುದ್ದ ಬೈಬಲ್‌

5 ಯೆಹೋಯಾದಾವನು ಅವರಿಗೆ, “ನೀವು ಈ ಕಾರ್ಯವನ್ನು ಮಾಡಲೇಬೇಕು. ನಿಮ್ಮಲ್ಲಿ ಸಬ್ಬತ್‌ದಿನದಂದು ಬರುವ ಮೂರನೆ ಒಂದು ಭಾಗದ ಜನರು ರಾಜನನ್ನು ಅವನ ಅರಮನೆಯಲ್ಲಿ ರಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋಯಾದಾವನು ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ರಾಜರ ಅರಮನೆಯನ್ನು ಕಾಯಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅನಂತರ ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗ ಅರಮನೆಯನ್ನು ಕಾಯಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ರಾಜಕುಮಾರನನ್ನು ತೋರಿಸಿ ಅವರಿಗೆ - ಸಬ್ಬತ್‍ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗವು ಅರಮನೆಯನ್ನು ಕಾಯಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 11:5
12 ತಿಳಿವುಗಳ ಹೋಲಿಕೆ  

ಗ್ರಾಮಗಳಲ್ಲಿ ನೆಲೆಸಿದ ದ್ವಾರಪಾಲಕರ ಕುಟುಂಬದವರು ತಮ್ಮ ಸರದಿಗನುಗುಣವಾಗಿ ಏಳು ದಿವಸದ ಕರ್ತವ್ಯ ಮುಗಿಸಿಹೋಗುತ್ತಿದ್ದರು.


ನಡೆಯುತ್ತಿರುವ ಎಲ್ಲಾ ಘಟನೆಗಳ ಬಗ್ಗೆ ಯೆಹೂದದ ಅಧಿಪತಿಗಳು ಕೇಳಿದರು. ಅವರು ರಾಜನ ಅರಮನೆಯಿಂದ ಹೊರಗೆ ಬಂದರು. ಅವರು ಯೆಹೋವನ ಆಲಯದವರೆಗೆ ಹೋದರು. ಅಲ್ಲಿ ಅವರು ಹೊಸ ಬಾಗಿಲಿನಲ್ಲಿದ್ದ ತಮ್ಮ ಆಸನಗಳಲ್ಲಿ ಕುಳಿತುಕೊಂಡರು. ಹೊಸಬಾಗಿಲಿನಿಂದ ದಾರಿ ಯೆಹೋವನ ಆಲಯಕ್ಕೆ ಹೋಗುತ್ತದೆ.


ಹೀಗೆ ಲೇವಿಯರು ತಾವು ಮಾಡಬೇಕಾದ ಕೆಲಸಗಳನ್ನೆಲ್ಲಾ ಮಾಡಿದರು. ಅವರು ಪವಿತ್ರ ಗುಡಾರವನ್ನು ಮತ್ತು ಪವಿತ್ರಸ್ಥಳವನ್ನು ನೋಡಿಕೊಂಡರು; ತಮ್ಮ ಸಂಬಂಧಿಕರೂ ಆರೋನನ ಕುಲದವರೂ ಆಗಿದ್ದ ಯಾಜಕರಿಗೆ ಸಹಾಯ ಮಾಡಿದರು.


ಅಹಾಜನು ಸಬ್ಬತ್ ದಿನಕ್ಕಾಗಿ ಕಟ್ಟಿದ ಮಂಟಪವನ್ನು ಬದಲಾಯಿಸಿದನು. ಕೆಲಸಗಾರರು ಆಲಯದ ಒಳಗೆ ಇದನ್ನು ನಿರ್ಮಿಸಿದ್ದರು. ಅಹಾಜನು ರಾಜನಿಗಾಗಿ ಇದ್ದ ಹೊರಭಾಗದ ಬಾಗಿಲನ್ನು ಬದಲಾಯಿಸಿದನು. ಅಹಾಜನು ದೇವಾಲಯದಿಂದ ಇವುಗಳನ್ನೆಲ್ಲಾ ಅಶ್ಶೂರದ ರಾಜನ ದೆಸೆಯಿಂದ ಬದಲಾಯಿಸಿದನು.


ಯಾಜಕನು ಜನರನ್ನೆಲ್ಲ ಕರೆದುಕೊಂಡು ಹೋದನು. ಅವರು ಸಿಪಾಯಿಗಳ ದ್ವಾರದ ಮೂಲಕ ಅರಮನೆಗೆ ಹೋದರು. ರಾಜನ ವಿಶೇಷ ಅಂಗರಕ್ಷಕರು ಮತ್ತು ಸೇನಾಧಿಪತಿಗಳು ರಾಜನ ಜೊತೆಯಲ್ಲಿ ಹೋದರು. ಅವರನ್ನು ಇತರ ಜನರೆಲ್ಲರೂ ಹಿಂಬಾಲಿಸಿದರು. ಅವರು ರಾಜನ ಅರಮನೆಯ ಬಾಗಿಲಿಗೆ ಹೋದರು. ನಂತರ ರಾಜನಾದ ಯೆಹೋವಾಷನು ಸಿಂಹಾಸನದ ಮೇಲೆ ಕುಳಿತುಕೊಂಡನು.


ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.


ಇನ್ನೊಂದು ಮೂರನೆಯ ಒಂದು ಭಾಗವು ಸೂರ್ ಬಾಗಿಲಿನಲ್ಲಿರಬೇಕು. ಮತ್ತೊಂದು ಮೂರನೆಯ ಒಂದು ಭಾಗವು ಕಾವಲುಗಾರನ ಹಿಂದೆ ಬಾಗಿಲಿನಲ್ಲಿರಬೇಕು. ಈ ರೀತಿ ನೀವು ಗೋಡೆಯಂತೆ ನಿಂತು ಯೆಹೋವಾಷನನ್ನು ರಕ್ಷಿಸುತ್ತಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು