2 ಅರಸುಗಳು 12:15 - ಪರಿಶುದ್ದ ಬೈಬಲ್15 ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕೆಲಸಗಾರರಿಗೆ ಸಂಬಳಕೊಡುವ ಮುಖ್ಯಸ್ಥರು ನಂಬಿಗಸ್ತರಾಗಿದ್ದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕೆಲಸಗಾರರಿಗೆ ಸಂಬಳ ಕೊಡುವ ಮೊಕ್ತೇಸರರು ನಂಬಿಗಸ್ತರಾಗಿದ್ದದರಿಂದ ಅವರ ವಶಕ್ಕೆ ಕೊಡಲ್ಪಟ್ಟ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು. ಅಧ್ಯಾಯವನ್ನು ನೋಡಿ |
ಕೆಲಸಗಾರರು ನಂಬಿಗಸ್ತಿಕೆಯಿಂದ ಕೆಲಸ ಮಾಡಿದರು. ಅವರು ಮೇಲ್ವಿಚಾರಕರು ಯಹತ್ ಮತ್ತು ಓಬದ್ಯ. ಇವರು ಲೇವಿಯರಾಗಿದ್ದರು ಮತ್ತು ಮೆರಾರೀಯ ಸಂತತಿಯವರಾಗಿದ್ದರು. ಇತರ ಮೇಲ್ವಿಚಾರಕರು ಯಾರೆಂದರೆ: ಜೆಕರ್ಯ ಮತ್ತು ಮೆಷುಲ್ಲಾಮ್. ಇವರು ಕೆಹಾತ್ಯನ ಸಂತತಿಯವರಾಗಿದ್ದರು. ವಾದ್ಯಗಳನ್ನು ಬಾರಿಸುವುದರಲ್ಲಿ ನಿಪುಣರಾದ ಲೇವಿಯರೂ ಕೆಲಸದ ಮೇಲ್ವಿಚಾರಣೆ ಮಾಡುತ್ತಿದ್ದರು. ಇತರ ಕೆಲವು ಲೇವಿಯರು, ಆ ಯೋಜನೆಯ ಅಧಿಕಾರಿಗಳಾಗಿಯೂ ಕಾರ್ಯದರ್ಶಿಗಳಾಗಿಯೂ ದ್ವಾರಪಾಲಕರಾಗಿಯೂ ನೇಮಕ ಮಾಡಲ್ಪಟ್ಟವರಾಗಿದ್ದರು.