2 ಅರಸುಗಳು 12:18 - ಪರಿಶುದ್ದ ಬೈಬಲ್18 ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟನೂ, ಯೆಹೋರಾಮನೂ, ಅಹಜ್ಯನೂ, ಯೆಹೂದ ರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಪ್ರತಿಷ್ಠೆಗಾಗಿ ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೂದದ ಅರಸನಾದ ಯೆಹೋವಾಷನು ಇದನ್ನು ಕೇಳಿ ತಾನೂ ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯ ಎಂಬ ಯೆಹೂದರಾಜರೂ ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳು, ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಬಂಗಾರ ಇವುಗಳನ್ನು ತೆಗೆದುಕೊಂಡು ಅರಾಮ್ಯರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು. ಅಧ್ಯಾಯವನ್ನು ನೋಡಿ |
ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.
ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.