2 ಅರಸುಗಳು 12:19 - ಪರಿಶುದ್ದ ಬೈಬಲ್19 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೆಹೋವಾಷನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವಾಷನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.