Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:20 - ಪರಿಶುದ್ದ ಬೈಬಲ್‌

20 ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ “ಸಿಲ್ಲಾ” ಊರಿಗೆ ಇಳಿದು ಹೋಗುವ ಮಾರ್ಗವಾದ “ಮಿಲ್ಲೋ” ಗೃಹದಲ್ಲಿ ಯೆಹೋವಾಷನನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:20
11 ತಿಳಿವುಗಳ ಹೋಲಿಕೆ  

ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು.


ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.


ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.


ಯಾರೊಬ್ಬಾಮನು ರಾಜನ ವಿರುದ್ಧ ಏಕೆ ತಿರುಗಿ ಬಿದ್ದನೆಂಬ ಕಥೆಯು ಹೀಗಿದೆ: ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟುತ್ತಿದ್ದನು ಮತ್ತು ತನ್ನ ತಂದೆಯಾದ ದಾವೀದನ ನಗರದ ಗೋಡೆಯನ್ನು ಭದ್ರಪಡಿಸುತ್ತಿದ್ದನು.


ಅಮೋನನ ಸೇವಕರು ಸಂಚುಮಾಡಿ ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ.


ಆಮೋನನ ಸೇವಕರು ಅವನ ವಿರುದ್ಧ ಒಳಸಂಚು ಮಾಡಿದರು ಮತ್ತು ಅವನ ಸ್ವಂತ ಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.


ಯೆಹೂದದ ರಾಜರುಗಳು ಎಂಬ ಇತಿಹಾಸ ಪುಸ್ತಕದಲ್ಲಿ ಯೆಹೋರಾಮನು ಮಾಡಿದ ಇತರ ಎಲ್ಲಾ ಕಾರ್ಯಗಳನ್ನು ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು