2 ಅರಸುಗಳು 12:3 - ಪರಿಶುದ್ದ ಬೈಬಲ್3 ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದುದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲವಾದದರಿಂದ ಜನರು ಅವುಗಳ ಮೇಲೆಯೇ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಅಧ್ಯಾಯವನ್ನು ನೋಡಿ |
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.