Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 12:4 - ಪರಿಶುದ್ದ ಬೈಬಲ್‌

4-5 ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 12:4
33 ತಿಳಿವುಗಳ ಹೋಲಿಕೆ  

ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು.


ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,


ಸಹಾಯ ಮಾಡುವುದಕ್ಕೆ ಬಯಸಿದ ಇಸ್ರೇಲರೆಲ್ಲರೂ ಯೆಹೋವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಈ ಕಾಣಿಕೆಗಳನ್ನು ಗಂಡಸರು ಮತ್ತು ಹೆಂಗಸರು ಕೊಡುವುದಕ್ಕೆ ಬಯಸಿದ್ದರಿಂದ ಉದಾರವಾಗಿ ಕೊಟ್ಟರು. ಯೆಹೋವನು ಮೋಶೆಗೆ ಮತ್ತು ಜನರಿಗೆ ಆಜ್ಞಾಪಿಸಿದ ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಈ ಕಾಣಿಕೆಗಳು ಉಪಯೋಗಿಸಲ್ಪಟ್ಟವು.


ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.


ಐಶ್ವರ್ಯವಂತರಿಗೆ ಬೇಕಾದಷ್ಟು ಇದೆ. ಅವರು ಕೇವಲ ತಮಗೆ ಅವಶ್ಯವಿಲ್ಲದ್ದನ್ನು ಕೊಟ್ಟರು. ಈ ಸ್ತ್ರೀ ಬಹಳ ಬಡವಳಾಗಿದ್ದರೂ ತನ್ನಲ್ಲಿ ಇದ್ದದ್ದೆಲ್ಲವನ್ನೂ ಕೊಟ್ಟಳು. ಈಕೆಗೆ ಆ ಹಣದ ಅವಶ್ಯವಿತ್ತು” ಎಂದು ಹೇಳಿದನು.


ದಾರಿಯಲ್ಲಿ ಬಾಬಿಲೋನ್ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂದರ್ಶಿಸಬೇಕು. ಅಲ್ಲಿ ವಾಸಿಸುವ ನಿನ್ನ ಜನರಿಂದಲೂ ಯಾಜಕರಿಂದಲೂ ಲೇವಿಯರಿಂದಲೂ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಸ್ವೀಕರಿಸು. ಆ ಕಾಣಿಕೆಗಳು ಜೆರುಸಲೇಮಿನಲ್ಲಿರುವ ದೇವಾಲಯಕ್ಕಾಗಿರುವುದು.


ದೇವಾಲಯ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.


ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು.


ದೇವಾಲಯದಲ್ಲಿ ಸೇವೆ ಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು.


ಆ ಬಳಿಕ ದೇವರಿಗೆ ಕೊಟ್ಟಿದ್ದ ದಶಮಾಂಶ ಮತ್ತು ಬೇರೆ ಕಾಣಿಕೆಗಳನ್ನು ಆ ಉಗ್ರಾಣದ ಕೋಣೆಗಳಲ್ಲಿ ಕೂಡಿಸಿಟ್ಟರು. ಲೇವಿಯನಾದ ಕೋನನ್ಯನು ಇದರ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟನು. ಇವನಿಗೆ ಸಹಾಯಕನಾಗಿ ಕೋನನ್ಯನ ಸೋದರನಾದ ಶಿಮ್ಮಿಯು ನೇಮಿಸಲ್ಪಟ್ಟನು.


ಆಸನು ತನ್ನ ತಂದೆಯು ಕೊಟ್ಟ ಪರಿಶುದ್ಧ ಕಾಣಿಕೆಗಳನ್ನು ದೇವಾಲಯದಲ್ಲಿ ಇಡಿಸಿದನು. ಅವು ಬೆಳ್ಳಿಬಂಗಾರಗಳ ವಸ್ತುಗಳಾಗಿದ್ದವು.


ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.


ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.


ಸೊಲೊಮೋನನು ತನಗಾಗಿ ಒಂದು ಅರಮನೆಯನ್ನು ನಿರ್ಮಿಸಿದನು. ಸೊಲೊಮೋನನ ಅರಮನೆಯನ್ನು ನಿರ್ಮಿಸಲು ಹದಿಮೂರು ವರ್ಷ ಹಿಡಿಯಿತು.


ಆದ್ದರಿಂದ ಒಬ್ಬನು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರೂ ಮರಳಿ ಪಡೆದುಕೊಳ್ಳಬೇಕೆಂದಿದ್ದರೆ, ಅವನು ಅದರ ಬೆಲೆಗೆ ಐದನೆಯ ಒಂದಂಶವನ್ನು ಸೇರಿಸಿಕೊಟ್ಟು ಮರಳಿ ಕೊಂಡುಕೊಳ್ಳಬೇಕು.


ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.


ದಾವೀದ ರಾಜನು ಅವುಗಳನ್ನು ಶುದ್ಧೀಕರಿಸಿ ಯೆಹೋವನಿಗೆ ಪ್ರತಿಷ್ಠಿಸಿದನು. ಅದೇ ರೀತಿಯಾಗಿ ಎದೋಮ್ಯರಿಂದ, ಮೋವಾಬ್ಯರಿಂದ, ಫಿಲಿಷ್ಟಿಯರಿಂದ, ಅಮಾಲೇಕ್ಯರಿಂದ ಮತ್ತು ಅಮ್ಮೋನಿಯರಿಂದ ತೆಗೆದುಕೊಂಡಿದ್ದ ಬೆಳ್ಳಿಬಂಗಾರದ ವಸ್ತುಗಳನ್ನು ಶುದ್ಧಿಮಾಡಿ ದೇವರಿಗೆ ಪ್ರತಿಷ್ಠಿಸಿದನು.


ದೇವಾಲಯದ ನಿರ್ಮಾಣವು ಇನ್ನೂ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ಜನರು ಅದುವರೆವಿಗೂ ಎತ್ತರವಾದ ಸ್ಥಳಗಳಲ್ಲಿ ಯಜ್ಞವೇದಿಕೆಯ ಮೇಲೆ ಪಶುಗಳ ಯಜ್ಞಗಳನ್ನು ಸಮರ್ಪಿಸುತ್ತಿದ್ದರು.


ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.


ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಪೂಜಾಸ್ಥಳಗಳಲ್ಲಿ ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪ ಹಾಕುತ್ತಿದ್ದರು.


ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಇನ್ನೂ ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು.


ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು.


ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು