2 ಅರಸುಗಳು 12:7 - ಪರಿಶುದ್ದ ಬೈಬಲ್7 ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದುದರಿಂದ ಅರಸನಾದ ಯೆಹೋವಾಷನು ಯೆಹೋಯಾದಾವ, ಮೊದಲಾದ ಯಾಜಕರನ್ನು ಕರೆದು ಅವರಿಗೆ, “ನೀವು ಈ ವರೆಗೂ ದೇವಾಲಯವನ್ನೇಕೆ ದುರಸ್ತಿ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರಿಂದ ಹಣವನ್ನು ವಸೂಲಿಮಾಡಿಕೊಳ್ಳದೆ ನಿಮ್ಮಲಿರುವ ಹಣದಿಂದ ದೇವಾಲಯದ ದುರಸ್ತಿಗಾಗಿ ಕಾರ್ಯವನ್ನು ಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದುದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು, “ನೀವು ಈವರೆಗೂ ದೇವಾಲಯವನ್ನೇಕೆ ದುರಸ್ತು ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದುಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ. ಕೂಡಲೆ ಅದನ್ನು ದೇವಾಲಯದ ದುರಸ್ತಿಗಾಗಿ ಕೊಡಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದ್ದರಿಂದ ಅರಸನಾದ ಯೋವಾಷನು ಯಾಜಕನಾದ ಯೆಹೋಯಾದಾವನನ್ನು, ಇತರ ಯಾಜಕರನ್ನು ಕರೆದು ಅವರಿಗೆ, “ನೀವು ದೇವಾಲಯದ ಒಡಕುಗಳನ್ನು ಏಕೆ ದುರಸ್ತಿ ಮಾಡಿಸುತ್ತಿಲ್ಲ? ಇನ್ನು ಮೇಲೆ ನೀವು ನಿಮಗೆ ಪರಿಚಯವಿರುವ ಖಜಾಂಚಿಯವರಿಂದ ಹಣವನ್ನು ತೆಗೆದುಕೊಳ್ಳದೆ ದೇವಾಲಯದ ಒಡಕುಗಳನ್ನು ದುರಸ್ತಿ ಮಾಡಿಸಲು ಅದನ್ನು ಒಪ್ಪಿಸಿಕೊಡಿರಿ,” ಎಂದನು. ಅಧ್ಯಾಯವನ್ನು ನೋಡಿ |
ಏಳನೆ ವರ್ಷದಲ್ಲಿ, ಪ್ರಧಾನ ಯಾಜಕನಾದ ಯೆಹೋಯಾದಾವನು ಕೆರೇತ್ಯರ ಸೇನಾಧಿಪತಿಗಳನ್ನು ಮತ್ತು ಕಾವಲುಗಾರರನ್ನು ಕರೆಸಿಕೊಂಡನು. ಯೆಹೋಯಾದಾವನು ಅವರನ್ನೆಲ್ಲ ಯೆಹೋವನ ಆಲಯದಲ್ಲಿ ಒಟ್ಟಾಗಿ ಸೇರಿಸಿದನು. ನಂತರ ಯೆಹೋಯಾದಾವನು ಅವರೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಯೆಹೋಯಾದಾವನು ಆಲಯದಲ್ಲಿ ಅವರು ವಾಗ್ದಾನ ಮಾಡುವಂತೆ ಬಲತ್ಕಾರಗೊಳಿಸಿದನು. ನಂತರ ಅವನು ಅವರಿಗೆ ರಾಜನ ಮಗನನ್ನು (ಯೆಹೋವಾಷನನ್ನು) ತೋರಿಸಿದನು.