2 ಅರಸುಗಳು 12:8 - ಪರಿಶುದ್ದ ಬೈಬಲ್8 ಆಗ ಯಾಜಕರು ಅವನಿಗೆ, “ನಾವು ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ ಮತ್ತು ಆಲಯವನ್ನು ಸರಿಪಡಿಸುವುದಕ್ಕೆ ಕೈ ಹಾಕುವುದಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಯಾಜಕರು ಅವನಿಗೆ, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ. ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ” ಎಂಬುದಾಗಿ ಮಾತುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆಗ ಯಾಜಕರು ಅವನಿಗೆ - ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವದಿಲ್ಲ. ದೇವಾಲಯದ ಜೀರ್ಣೋದ್ಧಾರಕ್ಕೆ ಕೈಹಾಕುವದಿಲ್ಲ ಎಂಬದಾಗಿ ಮಾತುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈ ಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು. ಅಧ್ಯಾಯವನ್ನು ನೋಡಿ |
ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.