Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:13 - ಪರಿಶುದ್ದ ಬೈಬಲ್‌

13 ಯೋವಾಷನು ತೀರಿಕೊಂಡಾಗ ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ಯಾರೊಬ್ಬಾಮನು ಯೋವಾಷಾನ ಸಿಂಹಾಸನದ ಮೇಲೆ ಕುಳಿತುಕೊಂಡು ನೂತನ ರಾಜನಾದನು. ಯೋವಾಷನನ್ನು ಸಮಾರ್ಯದಲ್ಲಿ ಇಸ್ರೇಲಿನ ರಾಜರುಗಳ ಜೊತೆ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೋವಾಷನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲರ ರಾಜಸ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವನು ನಿಧನನಾಗಿ ಪಿತೃಗಳ ಬಳಿ ಸೇರಲು ಇವನ ಶವವನ್ನು ಸಮಾರಿಯದೊಳಗೆ ಇಸ್ರಯೇಲ್ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವನು ಪಿತೃಗಳ ಬಳಿಗೆ ಸೇರಲು ಇವನ ಶವವನ್ನು ಸಮಾರ್ಯದೊಳಗೆ ಇಸ್ರಾಯೇಲ್ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೋವಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು, ಇವನ ಶವವನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸರ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನು ಅವನ ಸಿಂಹಾಸನ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:13
12 ತಿಳಿವುಗಳ ಹೋಲಿಕೆ  

ಬಳಿಕ ಅಹೀಯನು ಯಾರೊಬ್ಬಾಮನಿಗೆ, “ಈ ಅಂಗಿಯ ಹತ್ತು ತುಂಡುಗಳನ್ನು ನಿನಗೋಸ್ಕರವಾಗಿ ತೆಗೆದುಕೋ. ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ಸೊಲೊಮೋನನ ರಾಜ್ಯವನ್ನು ನಾನು ಹರಿದು ತುಂಡುಗಳನ್ನಾಗಿ ಮಾಡುತ್ತೇನೆ. ನಾನು ಹತ್ತು ಕುಲಗಳನ್ನು ನಿನಗೆ ಒಪ್ಪಿಸುತ್ತೇನೆ.


ನಂತರ ದಾವೀದನು ತೀರಿಕೊಂಡನು. ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ ಸೊಲೊಮೋನನನ್ನು ಮತ್ತು ನನ್ನನ್ನು ಅಪರಾಧಿಗಳೆಂದು ಜನರೆಲ್ಲರೂ ಹೇಳುವರು” ಎಂದು ಹೇಳಿದಳು.


“‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.


ಯೋವಾಷನು ಮಾಡಿದ ಮಹಾಕಾರ್ಯಗಳನ್ನು ಮತ್ತು ಯೆಹೂದದ ರಾಜನಾದ ಅಮಚ್ಯನ ವಿರುದ್ಧವಾಗಿ ಅವನು ಮಾಡಿದ ಯುದ್ಧಗಳನ್ನು, “ಇಸ್ರೇಲರ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.


ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾಮ, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.


ಯೆಹೋವಾಹಾಜನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೆಹೋವಾಹಾಜನ ನಂತರ ಅವನ ಮಗನಾದ ಯೋವಾಷನು ನೂತನ ರಾಜನಾದನು.


ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.


ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು