2 ಅರಸುಗಳು 13:14 - ಪರಿಶುದ್ದ ಬೈಬಲ್14 ಎಲೀಷನು ಕಾಯಿಲೆ ಬಿದ್ದನು. ತರುವಾಯ, ಈ ಕಾಯಿಲೆಯಿಂದ ಎಲೀಷನು ಸತ್ತುಹೋದನು. ಇಸ್ರೇಲಿನ ರಾಜನಾದ ಯೋವಾಷನು ಎಲೀಷನ ಬಳಿಗೆ ಹೋದನು. ಯೋವಾಷನು ಎಲೀಷನಿಗಾಗಿ ಗೋಳಾಡಿದನು. ಯೋವಾಷನು, “ನನ್ನ ತಂದೆಯೇ, ನನ್ನ ತಂದೆಯೇ, ದೇವರು ಬಂದು ನಿನ್ನನ್ನು ತೆಗೆದುಕೊಂಡು ಹೋಗಲು ಇದು ಸಕಾಲವೇ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಕಾಲದಲ್ಲಿ ಎಲೀಷನು ಮರಣಕರವಾದ ರೋಗಕ್ಕೆ ಗುರಿಯಾದನು. ಇಸ್ರಾಯೇಲರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲರಿಗೆ ರಥರಥಾಶ್ವಬಲಗಳಾಗಿದ್ದವನೇ” ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಎಲೀಷನು ಮರಣಕರ ರೋಗದಲ್ಲಿ ಬಿದ್ದನು. ಇಸ್ರಾಯೇಲ್ಯರ ಅರಸನಾದ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ - ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲ್ಯರಿಗೆ ರಥರಥಾಶ್ವಬಲಗಳಾಗಿದ್ದವನೇ ಎಂದು ಕೂಗುತ್ತಾ ಅವನ ಮುಖದ ಮೇಲೆ ಬಿದ್ದು ಬಹಳವಾಗಿ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು. ಅಧ್ಯಾಯವನ್ನು ನೋಡಿ |