Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:23 - ಪರಿಶುದ್ದ ಬೈಬಲ್‌

23 ಆದರೆ ಯೆಹೋವನು ಇಸ್ರೇಲರಿಗೆ ದಯಾಪರನಾಗಿದ್ದನು. ಯೆಹೋವನು ಕರುಣೆಯಿಂದ ಇಸ್ರೇಲರಿಗೆ ಅಭಿಮುಖನಾದನು. ಏಕೆಂದರೆ ಆತನು ಅಬ್ರಹಾಮನೊಂದಿಗೆ ಇಸಾಕನೊಂದಿಗೆ ಮತ್ತು ಯಾಕೋಬನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದನು. ಯೆಹೋವನು ಇಸ್ರೇಲರನ್ನು ನಾಶಗೊಳಿಸಲಿಲ್ಲ. ಅವರನ್ನು ಇನ್ನೂ ತಳ್ಳಿಬಿಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್ ಇಸಾಕ್ ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಸಿ ಅವರಿಗೆ ದಯೆತೋರಿಸಿದನು; ಕರುಳು ಮರುಗಿದವನಾಗಿ ಅವರಿಗೆ ಪ್ರಸನ್ನನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:23
36 ತಿಳಿವುಗಳ ಹೋಲಿಕೆ  

ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು. ಆತನು ತನ್ನ ಆಜ್ಞೆಗಳನ್ನು ಸಾವಿರ ತಲೆಮಾರುಗಳವರೆಗೂ ಜ್ಞಾಪಿಸಿಕೊಳ್ಳುವನು.


ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಯೆಹೋವನ ಕೋಪದಿಂದ ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಇವೆಲ್ಲವೂ ಸಂಭವಿಸಿದವು. ಹೀಗೆ ಯೆಹೋವನು ಅವರನ್ನು ತನ್ನಿಂದ ದೂರಸರಿಸಿದನು. ಚಿದ್ಕೀಯನು ಬಾಬಿಲೋನ್ ರಾಜನಿಗೆ ವಿರುದ್ಧವಾಗಿ ದಂಗೆ ಎದ್ದನು.


ಆದ್ದರಿಂದ ಯೆಹೋವನು ಇಸ್ರೇಲಿನ ಬಗ್ಗೆ ಉಗ್ರಕೋಪಿಯಾಗಿ, ಅವರನ್ನು ತನ್ನ ದೃಷ್ಟಿಯಿಂದ ದೂರಮಾಡಿದನು. ಯೆಹೂದಕುಲದವರ ಹೊರತಾಗಿ ಇಸ್ರೇಲರಲ್ಲಿ ಯಾರೂ ಉಳಿಯಲಿಲ್ಲ!


ಆದರೆ ದಯವಿಟ್ಟು ನನ್ನ ಪ್ರಾರ್ಥನೆಯನ್ನು ಮತ್ತು ಮನವಿಯನ್ನು ಕೇಳು. ನಾನು ನಿನ್ನ ಸೇವಕ. ಯೆಹೋವನೇ, ನೀನೇ ನನ್ನ ದೇವರು. ಇಂದು ನಿನಗೆ ನಾನು ಮಾಡುತ್ತಿರುವ ಈ ಪ್ರಾರ್ಥನೆಯನ್ನು ಲಾಲಿಸು.


ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ.


ಬಳಿಕ ನಾನು ಅವರಿಗಾಗಿ ಪರಿತಪಿಸುವೆನು. ನಾನು ಪ್ರತಿಯೊಂದು ಕುಟುಂಬವನ್ನು ಅದರ ಸ್ವಾಸ್ತ್ಯಕ್ಕೂ ಅದರ ದೇಶಕ್ಕೂ ಕರೆತರುವೆನು.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ಆಗ ನಾನು ಯಾಕೋಬನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಇಸಾಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನೂ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.


ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು.


ಅರಾಮ್ಯರ ರಾಜನಾದ ಹಜಾಯೇಲನು ಸತ್ತಮೇಲೆ ಬೆನ್ಹದದನು ನೂತನ ರಾಜನಾದನು.


ಆಗ ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಕೇಳಿ, ಅರಾಮ್ಯರ ರಾಜನಿಂದ ಬಾಧೆಗೆ ಒಳಗಾಗಿದ್ದ


ಇಸ್ರೇಲಿನ ಸ್ವತಂತ್ರರಾದ ಜನರೂ ಗುಲಾಮರೂ ಬಾಧೆಪಡುತ್ತಿರುವುದನ್ನು ಯೆಹೋವನು ನೋಡಿದನು. ಇಸ್ರೇಲರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.


ಯೆಹೋವನು ಇಸ್ರೇಲಿನ ಜನರೆಲ್ಲರನ್ನೂ ತಿರಸ್ಕರಿಸಿದನು. ಅವನು ಅವರಿಗೆ ಅನೇಕ ತೊಂದರೆಗಳನ್ನು ಉಂಟುಮಾಡಿದನು. ಅವರನ್ನು ನಾಶಗೊಳಿಸಲು ನಾಶಕರಿಗೆ ಆತನು ಅವಕಾಶ ನೀಡಿದನು. ಕೊನೆಗೆ, ಆತನು ಅವರನ್ನು ದೂರತಳ್ಳಿ, ತನ್ನ ದೃಷ್ಟಿಯಿಂದ ಅವರನ್ನೂ ದೂರಮಾಡಿದನು.


ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ.


ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.


ಆತನು ಅಬ್ರಹಾಮನೊಡನೆ ಒಡಂಬಡಿಕೆ ಮಾಡಿಕೊಂಡನು. ಆತನು ಇಸಾಕನಿಗೆ ವಾಗ್ದಾನ ಮಾಡಿದನು.


ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಂಡನು. ತನ್ನ ಮಹಾಪ್ರೀತಿಯಿಂದ ಅವರನ್ನು ಸಂತೈಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು