Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:25 - ಪರಿಶುದ್ದ ಬೈಬಲ್‌

25 ಹಜಾಯೇಲನು ಸಾಯುವುದಕ್ಕೆ ಮೊದಲು, ಯೋವಾಷನ ತಂದೆಯಾದ ಯೆಹೋವಾಹಾಜನಿಂದ ಯುದ್ಧದಲ್ಲಿ ಕೆಲವು ನಗರಗಳನ್ನು ಮತ್ತೆ ವಶಪಡಿಸಿಕೊಂಡನು. ಆದರೆ ಈಗ ಯೋವಾಷನು ಹಜಾಯೇಲನ ಮಗನಾದ ಬೆನ್ಹದದನಿಂದ ಈ ನಗರಗಳನ್ನು ವಶಪಡಿಸಿಕೊಂಡನು. ಯೋವಾಷನು ಬೆನ್ಹದದನನ್ನು ಮೂರು ಸಲ ಸೋಲಿಸಿ ಇಸ್ರೇಲಿನ ನಗರಗಳನ್ನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವಾಹಾಜನ ಮಗನಾದ ಯೆಹೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೆಹೋವಾಹಾಜನ ಮಗ ಯೋವಾಷನು, ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು, ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವಾಹಾಜನ ಮಗನಾದ ಯೋವಾಷನು ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು ಬೆನ್ಹದದನಿಂದ ತಿರಿಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:25
8 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ, ಯೆಹೋವನು ಇಸ್ರೇಲಿನ ಭಾಗಗಳನ್ನು ಕುಗ್ಗಿಸತೊಡಗಿದನು. ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿನ ಪ್ರತಿಯೊಂದು ಗಡಿಯಲ್ಲಿಯೂ ಇಸ್ರೇಲರನ್ನು ಸೋಲಿಸುತ್ತಿದ್ದನು.


ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು.


ಹಜಾಯೇಲನು ಜೋರ್ಡನ್ ನದಿಯ ಪೂರ್ವಕ್ಕಿರುವ ಪ್ರದೇಶವನ್ನೆಲ್ಲ ಗೆದ್ದುಕೊಂಡನು. ಅವನು ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳಿಗೆ ಸೇರಿದ ಎಲ್ಲಾ ಪ್ರದೇಶವನ್ನು, ಗಿಲ್ಯಾದ್‌ನ ಎಲ್ಲಾ ಪ್ರದೇಶವನ್ನು ಗೆದ್ದನು. ಹಜಾಯೇಲನು ಆರ್ನೋನ್ ಕಣಿವೆಯಿಂದ ಗಿಲ್ಯಾದ್, ಬಾಷಾನ್‌ವರೆಗಿನ ಅರೋಯೇರ್ ಪ್ರದೇಶವನ್ನೆಲ್ಲ ಗೆದ್ದುಕೊಂಡನು.


ಆಗ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಕೋಪಗೊಂಡು ಅರಾಮ್ಯರ ರಾಜನಾದ ಹಜಾಯೇಲನ ಮತ್ತು ಅವನ ಮಗನಾದ ಬೆನ್ಹದದನ ಅಧೀನಕ್ಕೆ ಇಸ್ರೇಲನ್ನು ಒಪ್ಪಿಸಿದನು.


ಇಸ್ರೇಲನ್ನು ರಕ್ಷಿಸಲು ಒಬ್ಬನನ್ನು ಯೆಹೋವನು ಕಳುಹಿಸಿದನು. ಇಸ್ರೇಲರು ಅರಾಮ್ಯದಿಂದ ಬಿಡುಗಡೆಗೊಂಡು ಸ್ವತಂತ್ರರಾದರು. ಇಸ್ರೇಲರು ತಮ್ಮ ಸ್ವಂತ ಮನೆಗಳಿಗೆ ಹಿಂದಿರುಗಿ ಸುರಕ್ಷಿತವಾಗಿ ವಾಸಿಸಿದರು.


ಅರಾಮ್ಯರ ರಾಜನಾದ ಹಜಾಯೇಲನು ಸತ್ತಮೇಲೆ ಬೆನ್ಹದದನು ನೂತನ ರಾಜನಾದನು.


ಈ ಎರಡು ಸೈನ್ಯಗಳೂ ಎದುರುಬದುರಾಗಿ ಏಳು ದಿನಗಳ ಕಾಲ ಪಾಳೆಯವನ್ನು ಹೂಡಿದವು. ಏಳನೆಯ ದಿನ ಯುದ್ಧವು ಆರಂಭವಾಯಿತು. ಇಸ್ರೇಲರು ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಸೈನಿಕರನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು