2 ಅರಸುಗಳು 13:6 - ಪರಿಶುದ್ದ ಬೈಬಲ್6 ಆದರೂ ಇಸ್ರೇಲರು ಪಾಪಗಳನ್ನು ಮಾಡುವಂತೆ ಪ್ರೇರೇಪಿಸಿದ ಯಾರೊಬ್ಬಾಮನ ಕುಟುಂಬದ ಪಾಪಗಳನ್ನು ಮಾಡುವುದನ್ನು ಇಸ್ರೇಲರು ನಿಲ್ಲಿಸಲಿಲ್ಲ. ಇಸ್ರೇಲರು ಯಾರೊಬ್ಬಾಮನ ಪಾಪಗಳನ್ನು ಮಾಡುತ್ತಲೇ ಹೋದರು. ಅವರು ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವನ್ನು ನೆಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು; ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರವಿಗ್ರಹಸ್ತಂಭವು ಇದ್ದೇ ಇತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು. ಅಧ್ಯಾಯವನ್ನು ನೋಡಿ |
ನಂತರ ರಾಜನು ಪ್ರಧಾನಯಾಜಕನಾದ ಹಿಲ್ಕೀಯನಿಗೆ, ಇತರ ಯಾಜಕರಿಗೆ, ದ್ವಾರಪಾಲಕರಿಗೆ, ಬಾಳ್‌ದೇವರಿಗೂ ಅಶೇರ ದೇವತೆಗೂ ಮತ್ತು ಆಕಾಶದ ನಕ್ಷತ್ರಗಳಿಗೂ ಉಪಯೋಗಿಸುತ್ತಿದ್ದ ಎಲ್ಲಾ ಸಲಕರಣೆಗಳನ್ನು ದೇವಾಲಯದಿಂದ ಹೊರತರುವಂತೆ ಆಜ್ಞಾಪಿಸಿದನು. ಯೋಷೀಯನು ಜೆರುಸಲೇಮಿನ ಹೊರಗೆ ಕಿದ್ರೋನ್ ಹೊಲಗಳಲ್ಲಿ ಅವುಗಳನ್ನು ಸುಟ್ಟುಹಾಕಿದನು. ಅವರು ಬೂದಿಯನ್ನು ಬೇತೇಲಿಗೆ ತೆಗೆದುಕೊಂಡು ಹೋದರು.
ಹಿಜ್ಕೀಯನು ಉನ್ನತಸ್ಥಳಗಳನ್ನು ನಾಶಗೊಳಿಸಿದನು. ಅವನು ಸ್ಮಾರಕಕಲ್ಲುಗಳನ್ನು ಒಡೆದುಹಾಕಿದನು ಮತ್ತು ಅಶೇರ ಕಲ್ಲುಗಳನ್ನು ಕತ್ತರಿಸಿಹಾಕಿದನು. ಆ ಸಮಯದಲ್ಲಿ ಇಸ್ರೇಲರು ಮೋಶೆಯು ಮಾಡಿದ ತಾಮ್ರಸರ್ಪಕ್ಕೆ ಧೂಪವನ್ನು ಸುಡುತ್ತಿದ್ದರು. ಈ ತಾಮ್ರಸರ್ಪವನ್ನು “ನೆಹುಷ್ಟಾನ್” ಎಂದು ಕರೆಯುತ್ತಿದ್ದರು. ಜನರು ಈ ಸರ್ಪವನ್ನು ಆರಾಧಿಸುತ್ತಿದ್ದುದರಿಂದ ಹಿಜ್ಕೀಯನು ಈ ತಾಮ್ರಸರ್ಪವನ್ನು ಒಡೆದು ಚೂರುಚೂರು ಮಾಡಿದನು.