2 ಅರಸುಗಳು 13:7 - ಪರಿಶುದ್ದ ಬೈಬಲ್7 ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು. ಅಧ್ಯಾಯವನ್ನು ನೋಡಿ |
ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.