Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:8 - ಪರಿಶುದ್ದ ಬೈಬಲ್‌

8 “ಇಸ್ರೇಲಿನ ರಾಜರುಗಳು ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಹಾಜನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವಾಹಾಜನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯೆಹೋವಾಹಾಜನ ಉಳಿದ ಚರಿತ್ರೆ ಹಾಗು ಅವನ ಶೂರಕೃತ್ಯಗಳ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವಾಹಾಜನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:8
8 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.


ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.


ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.


ಅರಾಮ್ಯರ ರಾಜನು ಯೆಹೋವಾಹಾಜನ ಸೇನೆಯನ್ನು ಸೋಲಿಸಿದನು. ಅರಾಮ್ಯರ ರಾಜನು ಐವತ್ತು ಮಂದಿ ರಾಹುತರನ್ನು, ಹತ್ತು ರಥಗಳನ್ನು ಮತ್ತು ಹತ್ತು ಸಾವಿರ ಭೂಸೈನಿಕರನ್ನು ಬಿಟ್ಟು ಉಳಿದವರೆಲ್ಲರನ್ನು ಸುಗ್ಗಿಯ ಕಾಲದಲ್ಲಿ ಗಾಳಿಗೆ ಹಾರಿಹೋಗುವ ಹೊಟ್ಟಿನಂತೆ ನಾಶಮಾಡಿದನು.


ಯೆಹೋವಾಹಾಜನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೆಹೋವಾಹಾಜನ ನಂತರ ಅವನ ಮಗನಾದ ಯೋವಾಷನು ನೂತನ ರಾಜನಾದನು.


ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು