Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:11 - ಪರಿಶುದ್ದ ಬೈಬಲ್‌

11 ಆದರೆ ಯೋವಾಷನ ಎಚ್ಚರಿಕೆಯನ್ನು ಅಮಚ್ಯನು ಆಲಿಸಲೇ ಇಲ್ಲ. ಆದ್ದರಿಂದ ಇಸ್ರೇಲಿನ ರಾಜನಾದ ಯೋವಾಷನು ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಹೋರಾಟ ಮಾಡಲು ಯೆಹೂದದ ಬೇತ್ಷೆಮೆಷಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಮಚ್ಯನು ಇದನ್ನು ಗಮನಕ್ಕೆ ತೆಗೆದುಕೊಳ್ಳದೆ ಇದ್ದುದರಿಂದ ಇಸ್ರಾಯೇಲರ ಅರಸನಾದ ಯೆಹೋವಾಷನು ಯುದ್ಧಕ್ಕೆ ಹೊರಟನು. ಅವರು ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದುದರಿಂದ ಇಸ್ರಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಜುದೇಯ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಅಮಚ್ಯನು ಕೇಳದೆ ಹೋದನು. ಆದ್ದರಿಂದ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:11
8 ತಿಳಿವುಗಳ ಹೋಲಿಕೆ  

ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್ ಮತ್ತು ಬೇತ್‌ಷೆಮೆಷ್ ಎಂಬವುಗಳು. ಒಟ್ಟಿನಲ್ಲಿ ಹತ್ತೊಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.


ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು.


ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.


ಆಯಿನ್, ಯುಟ್ಟಾ ಮತ್ತು ಬೇತ್‌ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.


ಬಾಲಾದಲ್ಲಿ ಆ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.


ಆದರೆ ಯೆಫ್ತಾಹನ ಸಂದೇಶವನ್ನು ಅಮ್ಮೋನಿಯರ ಅರಸನು ಕಿವಿಗೆ ಹಾಕಿಕೊಳ್ಳಲಿಲ್ಲ.


ಯೋವಾಷನು ಮಾಡಿದ ಮಹಾಕಾರ್ಯಗಳನ್ನು ಮತ್ತು ಯೆಹೂದದ ರಾಜನಾದ ಅಮಚ್ಯನ ವಿರುದ್ಧವಾಗಿ ಅವನು ಮಾಡಿದ ಯುದ್ಧಗಳನ್ನು, “ಇಸ್ರೇಲರ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು