Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 14:15 - ಪರಿಶುದ್ದ ಬೈಬಲ್‌

15 “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋವಾಷನು ಮಾಡಿದ ಇತರ ಮಹಾಕಾರ್ಯಗಳನ್ನೂ ಯೆಹೂದದ ರಾಜನಾದ ಅಮಚ್ಯನ ವಿರುದ್ಧ ಅವನು ಹೇಗೆ ಹೋರಾಡಿದನೆಂಬುದನ್ನೂ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವಾಷನ ಉಳಿದ ಚರಿತ್ರೆಯೂ, ಅವನ ಶೂರ ಕೃತ್ಯಗಳೂ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೋವಾಷನ ಉಳಿದ ಚರಿತ್ರೆ, ಅವನ ಶೂರಕೃತ್ಯಗಳ ಮತ್ತು ಜುದೇಯದ ರಾಜನಾದ ಅಮಚ್ಯನೊಡನೆ ನಡೆಸಿದ ಯುದ್ಧದ ವಿವರ, ಇವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೋವಾಷನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ಮತ್ತು ಯೆಹೂದ ರಾಜನಾದ ಅಮಚ್ಯನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲ್‍ರಾಜಕಾಲ ವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೋವಾಷನು ಮಾಡಿದ ಇತರ ಕ್ರಿಯೆಗಳೂ, ಅವನ ಪರಾಕ್ರಮವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ್ದೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 14:15
6 ತಿಳಿವುಗಳ ಹೋಲಿಕೆ  

ಯೋವಾಷನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರೊಡನೆ ಸಮಾರ್ಯದಲ್ಲಿ ಸಮಾಧಿಮಾಡಿದರು. ಯೋವಾಷನ ನಂತರ ಅವನ ಮಗನಾದ ಯಾರೊಬ್ಬಾಮನು ನೂತನ ರಾಜನಾದನು.


ಅಹಜ್ಯನು ಮಾಡಿದ ಇತರ ಕಾರ್ಯಗಳ ಬಗ್ಗೆ “ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ.


ಯೆಹೂದದ ರಾಜನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರೇಲರ ರಾಜನೂ ಯೋವಾಷನ ಮಗನೂ ಆದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲಾರಂಭಿಸಿದನು. ಯಾರೊಬ್ಬಾಮನು ನಲವತ್ತೊಂದು ವರ್ಷ ಆಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು