2 ಅರಸುಗಳು 14:19 - ಪರಿಶುದ್ದ ಬೈಬಲ್19 ಜನರು ಜೆರುಸಲೇಮಿನಲ್ಲಿ ಅಮಚ್ಯನ ವಿರುದ್ಧವಾಗಿ ಒಳಸಂಚು ಮಾಡಿದರು. ಅಮಚ್ಯನು ಲಾಕೀಷಿಗೆ ಓಡಿಹೋದನು. ಆದರೆ ಜನರು ಅಮಚ್ಯನ ಹಿಂದೆ ಲಾಕೀಷಿಗೆ ಆಳುಗಳನ್ನು ಕಳುಹಿಸಿದರು. ಅವರು ಲಾಕೀಷಿನಲ್ಲಿ ಅಮಚ್ಯನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆರೂಸಲೇಮಿನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |
ಆಗ ಯೆಹೂದದ ರಾಜನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿದನು. ಹಿಜ್ಕೀಯನು, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಡು. ನಂತರ ನೀನು ಅಪೇಕ್ಷಿಸಿದ್ದನ್ನೆಲ್ಲಾ ಕೊಡುತ್ತೇನೆ” ಎಂದು ಹೇಳಿದನು. ಆಗ ಅಶ್ಶೂರದ ರಾಜನು ಯೆಹೂದದ ರಾಜನಾದ ಹಿಜ್ಕೀಯನಿಗೆ ಸುಮಾರು ಹನ್ನೊಂದು ಟನ್ ಬೆಳ್ಳಿಯನ್ನು ಮತ್ತು ಒಂದು ಟನ್ ಚಿನ್ನವನ್ನು ಕೊಡುವಂತೆ ಹೇಳಿದನು.