2 ಅರಸುಗಳು 14:24 - ಪರಿಶುದ್ದ ಬೈಬಲ್24 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಯಾರೊಬ್ಬಾಮನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮಾಡುವುದನ್ನು ಯಾರೊಬ್ಬಾಮನು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿ |
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.