2 ಅರಸುಗಳು 14:25 - ಪರಿಶುದ್ದ ಬೈಬಲ್25 ಲೆಬೊಹಮಾತಿನಿಂದ ಅರಾಬ ಸಮುದ್ರದವರೆಗೆ ಹಬ್ಬಿದ ಇಸ್ರೇಲರ ದೇಶವನ್ನು ಯಾರೊಬ್ಬಾಮನು ಮತ್ತೆ ವಶಪಡಿಸಿಕೊಂಡನು. ಇಸ್ರೇಲರ ಯೆಹೋವನು ತನ್ನ ಸೇವಕನೂ ಅಮಿತ್ತೈನ ಮಗನೂ ಗತ್‌ಹೇಫೆರಿನ ಪ್ರವಾದಿಯೂ ಆದ ಯೋನಾ ಎಂಬವನ ಮೂಲಕ ಮೊದಲೇ ತಿಳಿಸಿದ್ದಂತೆ ಇದು ಸಂಭವಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಇಸ್ರಾಯೇಲರ ದೇವರಾದ ಯೆಹೋವನ ವಾಕ್ಯದ ಮೂಲಕ ತನ್ನ ಸೇವಕನೂ ಗತ್ ಹೇಫೆರಿನವನಾದ ಅಮಿತ್ತೈಯನ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲರ ಮೇರೆಯನ್ನು ಪುನಃ ವಶಪಡಿಸಿಕೊಂಡವನು ಇವನೇ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!