2 ಅರಸುಗಳು 14:3 - ಪರಿಶುದ್ದ ಬೈಬಲ್3 ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು; ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.
ಸೊಲೊಮೋನನು ತನಗೆ ಯೆಹೋವನ ಮೇಲಿದ್ದ ಪ್ರೀತಿಯನ್ನು ತೋರ್ಪಡಿಸಿದನು. ಅವನ ತಂದೆಯಾದ ದಾವೀದನು ಅವನಿಗೆ ಮಾಡಬೇಕೆಂದು ಹೇಳಿದ್ದ ಎಲ್ಲ ಕಾರ್ಯಗಳನ್ನು ಮಾಡುವುದರ ಮೂಲಕ ವಿಧೇಯತೆಯನ್ನು ತೋರ್ಪಡಿಸಿದನು. ಆದರೆ ಸೊಲೊಮೋನನು ತನಗೆ ದಾವೀದನು ಹೇಳದೆ ಇದ್ದ ಕೆಲವು ಕಾರ್ಯಗಳನ್ನೂ ಮಾಡಿದನು. ಸೊಲೊಮೋನನು ಎತ್ತರವಾದ ಸ್ಥಳಗಳನ್ನು ಯಜ್ಞವನ್ನರ್ಪಿಸಲು ಮತ್ತು ಧೂಪಹಾಕಲು ಉಪಯೋಗಿಸುತ್ತಿದ್ದನು.