Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:12 - ಪರಿಶುದ್ದ ಬೈಬಲ್‌

12 ಹೀಗೆ ಯೆಹೋವನ ವಾಕ್ಯವು ನೆರವೇರಿತು. ಯೇಹುವಿನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೆ ಇಸ್ರೇಲಿನ ರಾಜರಾಗಿರುತ್ತಾರೆ ಎಂದು ಯೆಹೋವನು ಅವನಿಗೆ ಮೊದಲೇ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಯೆಹೋವ ದೇವರು ಯೇಹುವಿಗೆ ಹೇಳಿದ ವಾಕ್ಯದಂತೆ ಇವೆಲ್ಲವೂ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:12
17 ತಿಳಿವುಗಳ ಹೋಲಿಕೆ  

ಯೆಹೋವನು ಯೇಹುವಿಗೆ, “ನೀನು ಒಳ್ಳೆಯದನ್ನು ಮಾಡಿದೆ. ನಾನು ಒಳ್ಳೆಯದೆಂದು ಹೇಳಿದ್ದನ್ನೇ ನೀನು ಮಾಡಿದೆ. ನನ್ನ ಅಪೇಕ್ಷೆಯಂತೆ ನೀನು ಅಹಾಬನ ಕುಟುಂಬವನ್ನು ನಾಶಗೊಳಿಸಿದೆ. ಆದ್ದರಿಂದ ನಿನ್ನ ಸಂತತಿಯವರು ಇಸ್ರೇಲನ್ನು ನಾಲ್ಕು ತಲೆಮಾರುಗಳವರೆಗೆ ಆಳುತ್ತಾರೆ” ಎಂದು ಹೇಳಿದನು.


“ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”


ಆದ್ದರಿಂದ ಸೈನಿಕರು, “ನಾವು ಇದನ್ನು ಹರಿದು ಪಾಲುಮಾಡಬಾರದು. ನಾವು ಚೀಟಿಹಾಕಿ ಇದು ಯಾರಿಗೆ ಬರುತ್ತದೋ ನೋಡೋಣ” ಎಂದು ಮಾತಾಡಿಕೊಂಡು ಹಾಗೆಯೇ ಮಾಡಿದರು. “ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲು ಮಾಡಿಕೊಂಡರು; ನನ್ನ ಅಂಗಿಗಾಗಿ ಚೀಟಿ ಹಾಕಿದರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ಮಾತು ಹೀಗೆ ನೆರವೇರಿತು.


ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.


ಭೂಮ್ಯಾಕಾಶಗಳು ನಾಶವಾಗುತ್ತವೆ. ಆದರೆ ನಾನು ಹೇಳಿದ ಮಾತುಗಳು ಎಂದೆಂದಿಗೂ ನಾಶವಾಗುವುದಿಲ್ಲ.


ಪ್ರವಾದಿಗಳು ನನ್ನ ಸೇವಕರು. ನಿಮ್ಮ ಪೂರ್ವಿಕರಿಗೆ ನ್ಯಾಯಪ್ರಮಾಣಗಳನ್ನು ಬೋಧಿಸಲು ನಾನು ಅವರನ್ನು ಉಪಯೋಗಿಸಿದೆನು. ನಿಮ್ಮ ಪೂರ್ವಿಕರು ಕಟ್ಟಕಡೆಗೆ ಪಾಠವನ್ನು ಕಲಿತರು. ಅವರು, ‘ಸರ್ವಶಕ್ತನಾದ ಯೆಹೋವನು ತಾನು ಹೇಳಿದ್ದನ್ನು ನೆರವೇರಿಸಿದನು. ನಮ್ಮ ದುಷ್ಕೃತ್ಯಗಳಿಗಾಗಿ ನಮ್ಮನ್ನು ಶಿಕ್ಷಿಸಿದನು’ ಎಂದು ಹೇಳಿದರು ಮತ್ತು ದೇವರ ಕಡೆಗೆ ತಿರುಗಿದರು.”


ಯಾರೊಬ್ಬಾಮನು ಸತ್ತಮೇಲೆ ಅವನನ್ನು ಅವನ ಪೂರ್ವಿಕರಾದ ಇಸ್ರೇಲಿನ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನ ಮಗನಾದ ಜೆಕರ್ಯನು ಅವನ ನಂತರ ಹೊಸ ರಾಜನಾದನು.


ಯೋವಾಷನು ತೀರಿಕೊಂಡಾಗ ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ಯಾರೊಬ್ಬಾಮನು ಯೋವಾಷಾನ ಸಿಂಹಾಸನದ ಮೇಲೆ ಕುಳಿತುಕೊಂಡು ನೂತನ ರಾಜನಾದನು. ಯೋವಾಷನನ್ನು ಸಮಾರ್ಯದಲ್ಲಿ ಇಸ್ರೇಲಿನ ರಾಜರುಗಳ ಜೊತೆ ಸಮಾಧಿಮಾಡಿದರು.


ಯೆಹೂದದ ರಾಜನಾಗಿದ್ದ ಯೆಹೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗನಾದ ಯೋವಾಷನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೋವಾಷನು ಇಸ್ರೇಲನ್ನು ಹದಿನಾರು ವರ್ಷ ಆಳಿದನು.


ಯೆಹೂದದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ ಯೇಹುವಿನ ಮಗನಾದ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋವಾಹಾಜನು ಹದಿನೇಳು ವರ್ಷ ಆಳಿದನು.


ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ಯೆಹೋವನು ಹೇಳಿದ್ದೆಲ್ಲವೂ ಸಂಭವಿಸುತ್ತದೆ ಎಂಬುದನ್ನು ನೀವು ತಿಳಿದಿರಬೇಕು. ಅಹಾಬನ ಕುಟುಂಬಕ್ಕೆ ಇವುಗಳು ಸಂಭವಿಸುತ್ತವೆಯೆಂದು ಯೆಹೋವನು ಎಲೀಯನ ಮೂಲಕ ತಿಳಿಸಿದ್ದನು. ಅಂತೆಯೇ ಆತನು ಮಾಡಿದ್ದಾನೆ” ಅಂದನು.


“ಇಸ್ರೇಲಿನ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಜೆಕರ್ಯನು ಮಾಡಿದ ಇತರ ಕಾರ್ಯಗಳನ್ನೆಲ್ಲ ಬರೆಯಲಾಗಿದೆ.


ಯೆಹೋವನು ಸಮುವೇಲನ ಸಂಗಡವಿದ್ದನು; ಸಮುವೇಲನು ಬೆಳೆದು ದೊಡ್ಡವನಾದನು; ಸಮುವೇಲನ ಯಾವ ಸಂದೇಶವೂ ಸುಳ್ಳಾಗದಂತೆ ಯೆಹೋವನು ನೋಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು