16 ಶಲ್ಲೂಮನು ಸತ್ತನಂತರ, ಮೆನಹೇಮನು ತಿಪ್ಸಹುವನ್ನು ಮತ್ತು ಅದರ ಸುತ್ತಲಿನ ಪ್ರದೇಶವನ್ನು ಸೋಲಿಸಿದನು. ಜನರು ನಗರದ ಬಾಗಿಲನ್ನು ಅವನಿಗೆ ತೆರೆಯಲು ನಿರಾಕರಿಸಿದರು. ಆದ್ದರಿಂದ ಮೆನಹೇಮನು ಅವರನ್ನು ಸೋಲಿಸಿ ಆ ನಗರದಲ್ಲಿದ್ದ ಗರ್ಭಿಣಿ ಸ್ತ್ರೀಯರ ಹೊಟ್ಟೆಗಳನ್ನು ಸೀಳಿಸಿದನು.
16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.
16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.
16 ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಲನ್ನು ಅವನಿಗೆ ತೆರೆದುಕೊಡಲಿಲ್ಲವಾದದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು; ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಸೀಳಿಸಿದನು.
16 ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.
ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು. ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.
ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”
ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.