Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:19 - ಪರಿಶುದ್ದ ಬೈಬಲ್‌

19 ಅಶ್ಶೂರ್ ದೇಶದ ರಾಜನಾದ ಪೂಲನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಮೆನಹೇಮನು ಪೂಲನಿಗೆ ಮೂವತ್ನಾಲ್ಕು ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು. ಪೂಲನು ಮೆನಹೇಮನಿಗೆ ಬೆಂಬಲವನ್ನು ನೀಡಲು ಮತ್ತು ಮೆನಹೇಮನ ರಾಜ್ಯವನ್ನು ಬಲಪಡಿಸಲು ಹೀಗೆ ಮಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:19
18 ತಿಳಿವುಗಳ ಹೋಲಿಕೆ  

ಅಮಚ್ಯನು ರಾಜ್ಯಾಧಿಕಾರವನ್ನು ಬಿಗಿಗೊಳಿಸಿಕೊಂಡ ಮೇಲೆ, ತನ್ನ ತಂದೆಯನ್ನು ಕೊಂದ ಅಧಿಕಾರಿಗಳನ್ನು ಕೊಂದುಹಾಕಿದನು.


ಈ ಸಮಯದಲ್ಲಿ, ಹಿಜ್ಕೀಯನು ಯೆಹೋವನ ಆಲಯದ ಬಾಗಿಲುಗಳಿಗೆ ಮತ್ತು ಕದಗಳಿಗೆ ಹೊದಿಸಿದ್ದ ಬಂಗಾರವನ್ನು ಕತ್ತರಿಸಿಹಾಕಿದನು. ರಾಜನಾದ ಹಿಜ್ಕೀಯನು ಈ ಬಾಗಿಲುಗಳ ಮತ್ತು ಕದಗಳ ಮೇಲೆ ಬಂಗಾರವನ್ನು ಹೊದಿಸಿದ್ದನು. ಹಿಜ್ಕೀಯನು ಈ ಬಂಗಾರವನ್ನು ಅಶ್ಶೂರದ ರಾಜನಿಗೆ ನೀಡಿದನು.


ಅಶ್ಶೂರದ ಅರಸನಿಗೆ ಬಹುಮಾನವಾಗಿ ಅದು ಒಯ್ಯಲ್ಪಡುವುದು; ಅವನು ಇಸ್ರೇಲರ ನಾಚಿಕೆಗೆಟ್ಟ ವಿಗ್ರಹವನ್ನು ಇಟ್ಟುಕೊಳ್ಳುವನು. ಇಸ್ರೇಲ್ ತನ್ನ ವಿಗ್ರಹಕ್ಕಾಗಿ ನಾಚಿಕೆಪಡುವದು.


ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.


ಹಿಂದಿನ ಕಾಲದಲ್ಲಿ, ಜೆಬುಲೋನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.


ಅಹಾಜನು ಯೆಹೋವನ ಆಲಯದಲ್ಲಿದ್ದ ಮತ್ತು ರಾಜನ ಅರಮನೆಯಲ್ಲಿದ್ದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಅಶ್ಶೂರದ ರಾಜನಿಗೆ ಕಾಣಿಕೆಯಾಗಿ ಕಳುಹಿಸಿದನು.


ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.


ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.


ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮೆನಹೇಮನು ಮಾಡಿದನು. ಇಸ್ರೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಮೆನಹೇಮನು ಮುಂದುವರಿಸಿದನು.


ಶ್ರೀಮಂತರು ಮತ್ತು ಅಧಿಕಾರವುಳ್ಳ ಜನರು ತೆರಿಗೆಯನ್ನು ನೀಡುವಂತೆ ಮಾಡಿ, ಮೆನಹೇಮನು ಈ ಹಣವನ್ನು ಸಂಗ್ರಹಿಸಿದನು. ಮೆನಹೇಮನು ಪ್ರತಿಯೊಬ್ಬ ಮನುಷ್ಯನಿಗೂ ಆರುನೂರು ಗ್ರಾಂ ಬೆಳ್ಳಿಯ ತೆರಿಗೆಯನ್ನು ವಿಧಿಸಿದನು. ನಂತರ ಮೆನಹೇಮನು ಅಶ್ಶೂರದ ರಾಜನಿಗೆ ಹಣವನ್ನು ಕೊಟ್ಟನು. ಆದ್ದರಿಂದ ಅಶ್ಶೂರದ ರಾಜನು ಬಿಟ್ಟುಹೋದನು; ಅವನು ಇಸ್ರೇಲಿನಲ್ಲೇ ನೆಲೆಸಲಿಲ್ಲ.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.


ಅಶ್ಶೂರ್ಯದವರು ಸಹ ಅವರೊಡನೆ ಸೇರಿಕೊಂಡು ಲೋಟನ ಸಂತತಿಯವರನ್ನು ಪ್ರಬಲರನ್ನಾಗಿ ಮಾಡಿದ್ದಾರೆ.


“ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು.


“ಒಹೊಲಳು ನನಗೆ ಅಪನಂಬಿಗಸ್ತಳಾದಳು. ಆಕೆ ಸೂಳೆಯಂತೆ ಜೀವಿಸತೊಡಗಿದಳು. ಆಕೆ ಪುರುಷರಿಗಾಗಿ ಆಸೆಪಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು