2 ಅರಸುಗಳು 15:28 - ಪರಿಶುದ್ದ ಬೈಬಲ್28 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೇ ಪೆಕಹನು ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಕೃತ್ಯಗಳನ್ನು ಪೆಕಹನು ಮುಂದುವರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.