2 ಅರಸುಗಳು 15:30 - ಪರಿಶುದ್ದ ಬೈಬಲ್30 ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನ ವಿರುದ್ಧ ಸಂಚುಗಳನ್ನು ಮಾಡಿ ಪೆಕಹನನ್ನು ಕೊಂದುಹಾಕಿದನು. ಪೆಕಹನ ನಂತರ ಹೋಶೇಯನು ಹೊಸ ರಾಜನಾದನು. ಉಜ್ಜೀಯನ ಮಗನಾದ ಯೋತಾಮನು ಯೆಹೂದದ ರಾಜನಾಗಿದ್ದ ಇಪ್ಪತ್ತನೆಯ ವರ್ಷದಲ್ಲಿ ಹೀಗಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆಗ ಏಲನ ಮಗನಾದ ಹೋಶೇಯನು ರೆಮಲ್ಯನ ಮಗನಾದ ಪೆಕಹನಿಗೆ ವಿರೋಧವಾಗಿ ಒಳಸಂಚುಮಾಡಿ ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿ |
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.