Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:10 - ಪರಿಶುದ್ದ ಬೈಬಲ್‌

10 ರಾಜನಾದ ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನನ್ನು ಭೇಟಿಮಾಡಲು ದಮಸ್ಕಕ್ಕೆ ಹೋದನು. ಅಹಾಜನು ದಮಸ್ಕದಲ್ಲಿದ್ದ ಯಜ್ಞವೇದಿಕೆಯನ್ನು ನೋಡಿದನು. ರಾಜನಾದ ಅಹಾಜನು ಯಜ್ಞವೇದಿಕೆಯ ವಿನ್ಯಾಸವನ್ನು ಮತ್ತು ಮಾದರಿಯನ್ನು ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅರಸನಾದ ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ, ದಮಸ್ಕದಲ್ಲಿ ಒಂದು ಬಲಿಪೀಠವನ್ನು ಕಂಡನು. ಅರಸನಾದ ಆಹಾಜನು ಆ ಬಲಿಪೀಠದ ರೂಪವನ್ನೂ, ಅದರ ಎಲ್ಲಾ ಕೈಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:10
22 ತಿಳಿವುಗಳ ಹೋಲಿಕೆ  

ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.


ನಾನು ನಂಬಿಗಸ್ತರಾದ ಕೆಲವು ಜನರನ್ನು ಸಾಕ್ಷಿಗೋಸ್ಕರವಾಗಿ ಆರಿಸಿಕೊಂಡೆನು. (ಅವರು ಯಾರೆಂದರೆ, ಯಾಜಕನಾದ ಊರೀಯ ಮತ್ತು ಯೆಬೆರೆಕ್ಯನ ಮಗನಾದ ಜೆಕರ್ಯ.) ನಾನು ಆ ವಾಕ್ಯವನ್ನು ಬರೆಯುವಾಗ ಇವರು ನೋಡುತ್ತಿದ್ದರು.


ಮೊದಲು ನೀವು ನಿರರ್ಥಕವಾದ ರೀತಿಯಲ್ಲಿ ಜೀವಿಸುತ್ತಿದ್ದಿರೆಂಬುದು ನಿಮಗೇ ತಿಳಿದಿದೆ. ನಿಮಗಿಂತಲೂ ಮೊದಲು ಜೀವಿಸಿದ್ದವರಿಂದ ಅಂತಹ ಜೀವಿತವನ್ನು ಕಲಿತುಕೊಂಡಿರಿ. ಆದರೆ ಅದರಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿಬಂಗಾರಗಳಿಂದಲ್ಲ.


ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ. ಇವರು ಮನುಷ್ಯರ ಕಟ್ಟಳೆಗಳನ್ನೇ ಉಪದೇಶಿಸುತ್ತಾರೆ.’”


ಅವನು ತನ್ನ ತಂದೆಯನ್ನು ಗೌರವಿಸಬೇಕಿಲ್ಲ ಎಂದು ನೀವು ಬೋಧಿಸುತ್ತೀರಿ. ಹೀಗಿರಲು ನಿಮ್ಮ ಸಂಪ್ರದಾಯವೇ ದೇವರ ಆಜ್ಞೆಯನ್ನು ತಳ್ಳಿಹಾಕಿದೆ.


ಅವರು ತಮ್ಮ ಎಲ್ಲಾ ಪಾಪಗಳ ನಿಮಿತ್ತ ನಾಚಿಕೆಪಡುವರು. ಆಲಯದ ವಿನ್ಯಾಸವನ್ನು ಅವರು ತಿಳಿದುಕೊಳ್ಳಲಿ. ಅದು ಹೇಗೆ ಕಟ್ಟಲ್ಪಡಬೇಕೆಂಬುದನ್ನು, ಪ್ರವೇಶ ದ್ವಾರಗಳು ಮತ್ತು ಹೊರಗೆ ಹೋಗುವ ಬಾಗಿಲುಗಳು ಎಲ್ಲಿರಬೇಕೆಂಬುದನ್ನು ಮತ್ತು ಅವುಗಳ ಮೇಲೆ ಇರಬೇಕಾದ ಎಲ್ಲಾ ಚಿತ್ರಗಳನ್ನು ಅವರು ತಿಳಿದುಕೊಳ್ಳಲಿ. ಅದರ ನಿಯಮಗಳನ್ನು, ಕಟ್ಟಳೆಗಳನ್ನು ಅವರಿಗೆ ಬೋಧಿಸಿರಿ. ಅವರು ಎಲ್ಲಾ ಧರ್ಮಬೋಧನೆಗಳನ್ನು ಅನುಸರಿಸುವಂತೆ ಎಲ್ಲಾ ಕಟ್ಟಳೆಗಳನ್ನು ಬರೆದಿಡಿರಿ.


ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.


ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.


ತಮ್ಮ ಪಾಪಕೃತ್ಯಗಳಿಂದ ದೇವಜನರು ಮಲಿನಗೊಂಡರು. ಅವರು ದೇವರಿಗೆ ಅಪನಂಬಿಗಸ್ತರಾಗಿ ಅನ್ಯಜನರು ಮಾಡಿದವುಗಳನ್ನು ಮಾಡಿದರು.


ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.


ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.


ಅಲ್ಲಿ ವಾಸಿಸುವ ಅನ್ಯಜನರನ್ನು ನೀವು ನಾಶಮಾಡಬೇಕು. ಇಲ್ಲದಿದ್ದಲ್ಲಿ ಅವರು ನಿಮಗೆ ಉರುಲಾಗುವರು; ಅವರ ವಿಗ್ರಹಗಳನ್ನು ಪೂಜಿಸದಂತೆ ಎಚ್ಚರಿಕೆಯಿಂದಿರಿ. ಆ ಸುಳ್ಳುದೇವರುಗಳಿಗೆ ಪ್ರಾರ್ಥಿಸಬೇಡಿ. ‘ಆ ಜನರು ಆ ಸುಳ್ಳುದೇವರುಗಳನ್ನು ಪೂಜಿಸಿದ ಹಾಗೆ ನಾನೂ ಪೂಜಿಸುವೆನು’ ಎಂದು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳಬೇಡಿ!


ಮೋಶೆಯು ಎಲ್ಲಾ ಕೆಲಸವನ್ನು ಸೂಕ್ಷ್ಮವಾಗಿ ಪರೀಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಎಲ್ಲವೂ ಮಾಡಲ್ಪಟ್ಟಿದ್ದರಿಂದ ಮೋಶೆ ಅವರನ್ನು ಆಶೀರ್ವದಿಸಿದನು.


ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.


ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೆಯೊಂದನ್ನು ನಿರ್ಮಿಸಿದ್ದನು.


ಮನಸ್ಸೆಯು ಸುಳ್ಳುದೇವತೆಗಳನ್ನು ಗೌರವಿಸಲು ದೇವಾಲಯದಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದನು. (“ನಾನು ನನ್ನ ಹೆಸರನ್ನು ಜೆರುಸಲೇಮಿನಲ್ಲಿ ಸ್ಥಾಪಿಸುತ್ತೇನೆ” ಎಂದು ಯೆಹೋವನು ಮಾತನಾಡುವಾಗ ಹೇಳುತ್ತಿದ್ದ ಸ್ಥಳವು ಇದೇ ಆಗಿತ್ತು.)


ಆ ಬಳಿಕ ನೀನು ಅಶ್ಶೂರದವರೊಂದಿಗೆ ಸಂಭೋಗಿಸಲು ಹೋದಿ. ನೀನು ತೃಪ್ತಿಗೊಳ್ಳುವಷ್ಟು ಆನಂದ ಸಿಗಲಿಲ್ಲ. ನೀನೆಂದೂ ತೃಪ್ತಿಗೊಂಡವಳಲ್ಲ.


ಆದರೆ ಆ ಲೇವಿಯರು, ಜನರು ನನಗೆ ವಿರುದ್ಧವಾಗಿ ಪಾಪ ಮಾಡುವಂತೆ ಸಹಾಯಮಾಡಿದರು. ಜನರು ತಮ್ಮ ವಿಗ್ರಹಗಳನ್ನು ಪೂಜಿಸುವಂತೆ ಅವರಿಗೆ ಸಹಾಯ ಮಾಡಿದರು. ಆದ್ದರಿಂದ ನಾನು ವಾಗ್ದಾನ ಮಾಡುವದೇನೆಂದರೆ, ‘ಅವರು ಮಾಡಿದ ಪಾಪಗಳಿಗಾಗಿ ಅವರು ಶಿಕ್ಷಿಸಲ್ಪಡುವರು.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳಿಗೆ ‘ನೀವು ಇಸ್ರೇಲಿಗೆ ಸಂಬಂಧಪಟ್ಟವರಲ್ಲ’ ಎಂದು ಹೇಳಿದರೆ, ನಮ್ಮ ಮಕ್ಕಳು ‘ಇಲ್ಲಿ ನೋಡಿ! ಗತಿಸಿಹೋದ ನಮ್ಮ ಪೂರ್ವಿಕರು ಒಂದು ಯಜ್ಞವೇದಿಕೆಯನ್ನು ಕಟ್ಟಿದ್ದಾರೆ. ಆ ಯಜ್ಞವೇದಿಕೆಯು ಪವಿತ್ರ ಗುಡಾರದಲ್ಲಿರುವ ಯಜ್ಞವೇದಿಕೆಯಂತಿದೆ. ನಾವು ಈ ಯಜ್ಞವೇದಿಕೆಯನ್ನು ಸರ್ವಾಂಗಹೋಮಗಳಿಗಾಗಲಿ ಯಜ್ಞಗಳಿಗಾಗಲಿ ಬಳಸುವುದಿಲ್ಲ. ನಾವು ಇಸ್ರೇಲಿಗೆ ಸೇರಿದವರೆಂಬುದಕ್ಕೆ ಈ ಯಜ್ಞವೇದಿಕೆ ಸಾಕ್ಷಿಯಾಗಿದೆ’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು