Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:12 - ಪರಿಶುದ್ದ ಬೈಬಲ್‌

12 ರಾಜನು ದಮಸ್ಕದಿಂದ ಹಿಂದಿರುಗಿಬಂದು ಯಜ್ಞವೇದಿಕೆಯನ್ನು ನೋಡಿದನು. ಅವನು ಯಜ್ಞಗಳನ್ನು ಅದರ ಮೇಲೆ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅರಸನು ಹಿಂದಿರುಗಿ ಬಂದ ಮೇಲೆ ಆ ಬಲಿಪೀಠವನ್ನು ಕಂಡು ಅದರ ಸಮೀಪಕ್ಕೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅರಸನು ಹಿಂದಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು ಅದರ ಸಮೀಪಕ್ಕೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ಕಂಡನು. ಅರಸನು ಬಲಿಪೀಠದ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:12
8 ತಿಳಿವುಗಳ ಹೋಲಿಕೆ  

ಯೆಹೂದದ ಪ್ರತಿಯೊಂದು ಪಟ್ಟಣಗಳಲ್ಲಿ ಆಹಾಜನು ಧೂಪಹಾಕಲು ಮತ್ತು ಬೇರೆ ದೇವರುಗಳನ್ನು ಪೂಜಿಸಲು ಉನ್ನತಸ್ಥಳಗಳನ್ನು ಮಾಡಿಸಿದನು; ಅನ್ಯ ದೇವರುಗಳಿಗೆ ಧೂಪಹಾಕಲು ಜನರನ್ನು ಪ್ರೋತ್ಸಾಹಿಸಿದನು. ಈ ರೀತಿಯಾಗಿ ತನ್ನ ಪೂರ್ವಿಕರು ಆರಾಧಿಸಿದ ದೇವರಾದ ಯೆಹೋವನನ್ನು ಆಹಾಜನು ರೇಗಿಸಿದನು.


ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.


ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.


ಆಗ ಯಾಜಕನಾದ ಊರೀಯನು, ದಮಸ್ಕದಿಂದ ರಾಜನಾದ ಅಹಾಜನು ತನಗೆ ಕಳುಹಿಸಿದ ಯಜ್ಞವೇದಿಕೆಯ ಮಾದರಿಯಲ್ಲೇ ಮತ್ತೊಂದು ಯಜ್ಞವೇದಿಕೆಯೊಂದನ್ನು ನಿರ್ಮಿಸಿದನು. ಹೀಗೆ ರಾಜನಾದ ಅಹಾಜನು ದಮಸ್ಕದಿಂದ ಹಿಂತಿರುಗುವುದಕ್ಕೆ ಮೊದಲೇ ಊರೀಯನು ಯಜ್ಞವೇದಿಕೆಯೊಂದನ್ನು ನಿರ್ಮಿಸಿದ್ದನು.


ಅಹಾಜನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಅರ್ಪಿಸಿದನು; ಪಾನನೈವೇದ್ಯವನ್ನು ಸುರಿಸಿದನು; ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಯಜ್ಞವೇದಿಕೆಯ ಮೇಲೆ ಚಿಮಿಕಿಸಿದನು.


ರಾಜನಾದ ಯಾರೊಬ್ಬಾಮನು ಇಸ್ರೇಲರಿಗೆ ತನ್ನದೇ ಆದ ಹಬ್ಬದ ದಿನವನ್ನು ಆರಿಸಿಕೊಂಡನು. ಅದು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಮಯದಲ್ಲಿ ಅವನು ತಾನು ನಿರ್ಮಿಸಿದ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಮತ್ತು ಧೂಪವನ್ನು ಅರ್ಪಿಸಿದನು. ಇದು ಬೇತೇಲ್ ನಗರದಲ್ಲಿ ನಡೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು