2 ಅರಸುಗಳು 16:14 - ಪರಿಶುದ್ದ ಬೈಬಲ್14 ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿ |
ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.
ಅವರ ಹೊಸ್ತಿಲನ್ನು ನನ್ನ ಹೊಸ್ತಿಲ ಬಳಿಯಲ್ಲಿ ಇಡುವದರಿಂದ ಅವರ ನಿಲುವುಗಳನ್ನು ನನ್ನ ನಿಲುವುಗಳ ಬಳಿಯಲ್ಲಿ ಇಡುವದರಿಂದ ಅವರು ನನ್ನ ಹೆಸರಿಗೆ ಅವಮಾನ ಮಾಡುವದಿಲ್ಲ. ಹಿಂದಿನ ಕಾಲದಲ್ಲಿ, ಕೇವಲ ಒಂದೇ ಗೋಡೆಯು ಅವರಿಂದ ನನ್ನನ್ನು ಪ್ರತ್ಯೇಕಿಸಿತ್ತು. ಆದ್ದರಿಂದ ಪ್ರತಿಯೊಂದು ಸಲ ಅವರು ಪಾಪ ಮಾಡಿದಾಗ ಮತ್ತು ಆ ಭಯಂಕರ ಕೃತ್ಯಗಳನ್ನು ಮಾಡಿದಾಗ ನನ್ನ ಹೆಸರಿಗೆ ಅವಮಾನವಾಯಿತು. ಆದ್ದರಿಂದ ನಾನು ಕೋಪಗೊಂಡು ಅವರನ್ನು ನಾಶಮಾಡಿದೆನು.