Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 16:2 - ಪರಿಶುದ್ದ ಬೈಬಲ್‌

2 ಅಹಾಜನು ರಾಜನಾದಾಗ ಅವನಿಗೆ ಇಪ್ಪತ್ತು ವರ್ಷ ವಯಸ್ಸಾಗಿತ್ತು. ಅಹಾಜನು ಜೆರುಸಲೇಮನ್ನು ಹದಿನಾರು ವರ್ಷ ಆಳಿದನು. ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿದ್ದ ಕಾರ್ಯಗಳನ್ನು ಅಹಾಜನು ಮಾಡಲಿಲ್ಲ. ಅವನ ಪೂರ್ವಿಕನಾದ ದಾವೀದನು ದೇವರಿಗೆ ವಿಧೇಯನಾಗಿದ್ದನು; ಆದರೆ ಅಹಾಜನು ವಿಧೇಯನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಜ ದಾವೀದನ ಮಾರ್ಗವನ್ನು ಬಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 16:2
14 ತಿಳಿವುಗಳ ಹೋಲಿಕೆ  

ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನಿಗೆ ಸರಿಯಾಗಿ ನಡೆದುಕೊಂಡನು. ಅವನು ದೇವರ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.


ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೇ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.


ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.


ಹಿಜ್ಕೀಯನು ತನ್ನ ಪೂರ್ವಿಕನಾದ ದಾವೀದನಂತೆ, ಯೆಹೋವನು ಯೋಗ್ಯವೆಂದು ಹೇಳಿದ್ದನ್ನು ಮಾಡಿದನು.


ಯೋತಾಮನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಮಾಡಿದನು.


ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಗೆ ಯೋಗ್ಯವಾದ ಕಾರ್ಯಗಳನ್ನು ಮಾಡಿದನು. ಅಜರ್ಯನು ತನ್ನ ತಂದೆಯಾದ ಅಮಚ್ಯನು ಮಾಡಿದ ಕಾರ್ಯಗಳನ್ನೇ ಅನುಸರಿಸಿದನು.


ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಅಮಚ್ಯನು ಮಾಡಿದನು. ಆದರೆ ಅವನು ತನ್ನ ಪೂರ್ವಿಕನಾದ ದಾವೀದನು ಅನುಸರಿಸಿದಂತೆ ಸಂಪೂರ್ಣವಾಗಿ ಯೆಹೋವನನ್ನು ಅನುಸರಿಸಲಿಲ್ಲ. ಅಮಚ್ಯನು ತನ್ನ ತಂದೆಯಾದ ಯೆಹೋವಾಷನು ಮಾಡಿದ ಕಾರ್ಯಗಳನ್ನೆಲ್ಲ ಮಾಡಿದನು.


ಅವನಿಗಿಂತಲೂ ಮುಂಚೆ ಅವನ ತಂದೆಯು ಮಾಡಿದ ಪಾಪಗಳನ್ನೇ ಅವನೂ ಮಾಡಿದನು. ಅವನ ಪಿತೃವಾದ ದಾವೀದನು ತನ್ನ ದೇವರಾದ ಯೆಹೋವನಿಗೆ ನಂಬಿಗಸ್ತನಾಗಿದ್ದಂತೆ ಅಬೀಯಾಮನು ನಂಬಿಗಸ್ತನಾಗಿರಲಿಲ್ಲ.


ನಿನ್ನ ತಂದೆಯಾದ ದಾವೀದನು ಸೇವೆಮಾಡಿದಂತೆ ನೀನೂ ನನ್ನ ಸೇವೆಮಾಡಬೇಕು, ಅವನು ನ್ಯಾಯವಂತನಾಗಿದ್ದನು ಮತ್ತು ಯಥಾರ್ಥವಂತನಾಗಿದ್ದನು; ನೀನು ನನ್ನ ನಿಯಮಗಳಿಗೆ ವಿಧೇಯನಾಗಿರಬೇಕು ಮತ್ತು ನಾನು ನಿನಗೆ ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.


ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ದೀರ್ಘಾಯುಷ್ಯವನ್ನು ಕೊಡುತ್ತೇನೆ” ಎಂದು ಹೇಳಿದನು.


ಅಹಾಜನ ಮಗನಾದ ಹಿಜ್ಕೀಯನು ಯೆಹೂದದ ರಾಜನಾದನು. ಏಲನ ಮಗನಾದ ಹೋಶೇಯನು ಇಸ್ರೇಲಿನ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಹಿಜ್ಕೀಯನು ಆಳಲಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು