2 ಅರಸುಗಳು 16:4 - ಪರಿಶುದ್ದ ಬೈಬಲ್4 ಅಹಾಜನು ಉನ್ನತಸ್ಥಳಗಳಲ್ಲಿ ಮತ್ತು ಬೆಟ್ಟಗಳ ಮೇಲೆ ಮತ್ತು ಹಸಿರು ಮರಗಳ ಕೆಳಗೆ ಯಜ್ಞಗಳನ್ನು ಅರ್ಪಿಸಿದನು ಮತ್ತು ಧೂಪವನ್ನು ಸುಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೆಯೂ ಎಲ್ಲಾ ಹಸುರು ಮರಗಳ ಕೆಳಗೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು. ಅಧ್ಯಾಯವನ್ನು ನೋಡಿ |
ಅವರು ತಮ್ಮ ವಿಶೇಷವಾದ ತೋಟದೊಳಗೆ ಪೂಜೆಮಾಡಲು ತಮ್ಮನ್ನು ಶುದ್ಧಮಾಡಿಕೊಳ್ಳುವಂತೆ ಸ್ನಾನಮಾಡುವರು. ತಮ್ಮ ವಿಶೇಷ ತೋಟದೊಳಗೆ ಹೋಗಲು ಒಬ್ಬರನ್ನೊಬ್ಬನು ಹಿಂಬಾಲಿಸುವರು. ಅಲ್ಲಿ ಅವರ ವಿಗ್ರಹಗಳನ್ನು ಪೂಜಿಸುವರು. ಆದರೆ ಯೆಹೋವನು ಅವರೆಲ್ಲರನ್ನು ನಾಶಮಾಡುವನು. “ಆ ಜನರು ಹಂದಿ, ಇಲಿ ಮತ್ತು ಇತರ ಅಶುದ್ಧ ಪ್ರಾಣಿಗಳ ಮಾಂಸವನ್ನು ತಿನ್ನುತ್ತಾರೆ. ಆದರೆ ಅವರೆಲ್ಲರೂ ಒಟ್ಟಾಗಿ ನಾಶವಾಗುವರು.” ಇದು ಯೆಹೋವನು ಹೇಳಿದ ಮಾತುಗಳು.
ಆಗಲೇ ನಾನು ಯೆಹೋವನೆಂದು ನೀವು ಅರಿಯುವಿರಿ. ಅವರ ದೇಶದಲ್ಲಿರುವವರ ಹೆಣಗಳು ಅವರ ಹೊಲಸು ವಿಗ್ರಹಗಳ ಸುತ್ತಲೂ ಯಜ್ಞವೇದಿಗಳ ಸುತ್ತಲೂ ಎತ್ತರವಾದ ಸ್ಥಳಗಳ ಮೇಲೆಯೂ ಬೆಟ್ಟಗಳಲ್ಲಿಯೂ ಮತ್ತು ಪ್ರತಿಯೊಂದು ಹಸಿರು ಮರದ ಕೆಳಗೂ ಬೀಳುವಾಗ ನಾನೇ ಯೆಹೋವನೆಂದು ಅವರು ತಿಳಿದುಕೊಳ್ಳುವರು. ಅವರು ಈ ಎಲ್ಲಾ ಸ್ಥಳಗಳಲ್ಲಿ ತಮ್ಮ ಎಲ್ಲಾ ಹೊಲಸು ವಿಗ್ರಹಗಳಿಗೆ ಪರಿಮಳಭರಿತವಾದ ಯಜ್ಞಗಳನ್ನು ಅರ್ಪಿಸಿದರು.
ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.