2 ಅರಸುಗಳು 16:5 - ಪರಿಶುದ್ದ ಬೈಬಲ್5 ಅರಾಮ್ಯರ ರಾಜನಾದ ರೆಚೀನನು ಮತ್ತು ರೆಮಲ್ಯನ ಮಗನೂ ಇಸ್ರೇಲಿನ ರಾಜನೂ ಆದ ಪೆಕಹನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಬಂದರು. ರೆಚೀನ ಮತ್ತು ಪೆಕಹ ಅಹಾಜನಿಗೆ ಮುತ್ತಿಗೆ ಹಾಕಿದರು. ಆದರೆ ಅವನನ್ನು ಸೋಲಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇವನ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನ್ ಮತ್ತು ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಜೆರುಸಲೇಮಿಗೆ ವಿರುದ್ಧ ದಾಳಿಮಾಡಿ ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸಲು ಅವರಿಂದ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಯೆರೂಸಲೇವಿುಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವದು ಅವರಿಂದ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅರಾಮಿನ ಅರಸನಾದ ರೆಚೀನ್, ಮತ್ತು ಇಸ್ರಾಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನು ಯುದ್ಧಮಾಡಲು ಯೆರೂಸಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ. ಅಧ್ಯಾಯವನ್ನು ನೋಡಿ |