2 ಅರಸುಗಳು 16:6 - ಪರಿಶುದ್ದ ಬೈಬಲ್6 ಆ ಸಮಯಲ್ಲಿ ಅರಾಮ್ಯರ ರಾಜನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ಯಕ್ಕೆ ಸೇರಿಸಿಕೊಂಡನು. ರೆಚೀನನು ಏಲತ್ ಪಟ್ಟಣದಲ್ಲಿ ವಾಸಿಸುತ್ತಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಅರಾಮ್ಯರು ಬಂದು ಏಲತ್ ಪಟ್ಟಣದಲ್ಲಿ ನೆಲೆಸಿದರು; ಅವರು ಇಂದಿನವರೆಗೂ ಅಲ್ಲಿಯೇ ವಾಸಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು.ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್‍ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದೇ ವೇಳೆಯಲ್ಲಿ ಅರಾಮಿನ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ತಿರುಗಿ ಸೇರಿಸಿಕೊಂಡು ಏಲತ್ ಪಟ್ಟಣದಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು. ಎದೋಮ್ಯರು ಏಲತ್ ಪಟ್ಟಣದಲ್ಲಿ ಬಂದು ಇಂದಿನವರೆಗೂ ಅಲ್ಲಿ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿ |