7 ಅಹಾಜನು ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಆ ಸಂದೇಶವೇನೆಂದರೆ: “ನಾನು ನಿನ್ನ ಸೇವಕ. ನಾನು ನಿನಗೆ ಮಗನಂತಿದ್ದೇನೆ. ನೀನು ಬಂದು, ಅರಾಮ್ಯರ ರಾಜನಿಂದ ಮತ್ತು ಇಸ್ರೇಲಿನ ರಾಜನಿಂದ ನನ್ನನ್ನು ರಕ್ಷಿಸು. ಅವರು ನನ್ನ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆ.”
7 ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
7 ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.
7 ಆಹಾಜನು ಅಶ್ಶೂರ್‍ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನಿನ್ನ ದಾಸನೂ ಮಗನೂ ಆಗಿದ್ದೇನೆ; ನೀನು ಬಂದು ನನ್ನನ್ನು ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲ್ಯರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು ಎಂದು ಹೇಳಿಸಿದನು.
7 ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.
ಅಶ್ಶೂರದ ರಾಜನಾದ ತಿಗ್ಲತ್ಪಿಲೆಸರನೆಂಬವನು ಇಸ್ರೇಲಿನ ವಿರುದ್ಧ ಯುದ್ಧಕ್ಕೆ ಬಂದನು. ಪೆಕಹನು ಇಸ್ರೇಲಿನ ರಾಜನಾಗಿದ್ದ ಸಂದರ್ಭದಲ್ಲಿ ಇದು ಸಂಭವಿಸಿತು. ತಿಗ್ಲತ್ಪಿಲೆಸರನು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಪ್ರಾಂತ್ಯಗಳನ್ನೆಲ್ಲ ಸ್ವಾಧೀನಪಡಿಸಿಕೊಂಡನು. ತಿಗ್ಲತ್ಪಿಲೆಸರನು ಈ ಸ್ಥಳಗಳಲ್ಲಿದ್ದ ಜನರನ್ನು ಸೆರೆಯಾಳುಗಳನ್ನಾಗಿಸಿ ಅಶ್ಶೂರಿಗೆ ಕೊಂಡೊಯ್ದನು.
ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”
ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.
ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.
ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು.
ಇಸ್ರೇಲರ ದೇವರು ಅಶ್ಯೂರದ ರಾಜನಾದ ಪೂಲ್ (ತಿಗ್ಲತ್ಪಿಲೆಸರ್) ಅವರ ಮೇಲೆ ಯುದ್ಧಕ್ಕೆ ಹೋಗುವಂತೆ ಮಾಡಿದನು. ಅವರು ಬಂದು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರೊಂದಿಗೆ ಯುದ್ಧ ಮಾಡಿದರು. ಯುದ್ಧದಲ್ಲಿ ಅವರನ್ನು ಸೋಲಿಸಿ, ಸೆರೆಹಿಡಿದು ಹಲಹ, ಹಾಬೋರ್, ಹಾರ ಮತ್ತು ಗೋಜಾನ್ ನದಿಯ ಸಮೀಪದ ಸ್ಥಳಕ್ಕೆ ಕೈದಿಗಳನ್ನಾಗಿ ಕೊಂಡೊಯ್ದರು. ಅಂದಿನಿಂದ ಇಂದಿನ ತನಕವೂ ಇಸ್ರೇಲರು ಆ ಸ್ಥಳಗಳಲ್ಲಿ ವಾಸಮಾಡುತ್ತಿರುವರು.
ಯೆಹೋವನು ಹಿಜ್ಕೀಯನೊಂದಿಗಿದ್ದನು. ಹಿಜ್ಕೀಯನು ತಾನು ಮಾಡಿದ್ದರಲ್ಲೆಲ್ಲಾ ಜಯಗಳಿಸಿದನು. ಹಿಜ್ಕೀಯನು ಅಶ್ಶೂರದ ರಾಜನೊಂದಿಗಿದ್ದ ಸಂಬಂಧವನ್ನು ಕಡಿದುಹಾಕಿದನು. ಅಶ್ಶೂರದ ರಾಜನ ಸೇವೆಯನ್ನು ಹಿಜ್ಕೀಯನು ನಿಲ್ಲಿಸಿದನು.
ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.
ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.