2 ಅರಸುಗಳು 16:9 - ಪರಿಶುದ್ದ ಬೈಬಲ್9 ಅಶ್ಶೂರದ ರಾಜನು ಅಹಾಜನ ಮಾತುಗಳನ್ನು ಕೇಳಿ ದಮಸ್ಕದ ವಿರುದ್ಧ ಯುದ್ಧಕ್ಕೆ ಹೊರಟು ಆ ನಗರಕ್ಕೆ ಮುತ್ತಿಗೆಹಾಕಿ, ದಮಸ್ಕದ ಜನರನ್ನು ಸೆರೆಹಿಡಿದುಕೊಂಡು ಕೀರ್‌ಗೆ ಒಯ್ದನು. ಅವನು ರೆಚೀನನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಇವನ ಮಾತಿಗೆ ಒಪ್ಪಿ ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತಕ್ಕೆ ಒಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |
ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.