2 ಅರಸುಗಳು 17:14 - ಪರಿಶುದ್ದ ಬೈಬಲ್14 ಆದರೆ ಅವರು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ; ತಮ್ಮ ದೇವರಾದ ಯೆಹೋವನನ್ನು ನಂಬದೆಹೋದ ತಮ್ಮ ಪೂರ್ವಿಕರನ್ನೇ ಅನುಸರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದರೆ ಅವರು ದೇವರಾದ ಯೆಹೋವನನ್ನು ನಂಬದೆ, ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಯೆಹೋವನ ಮಾತಿಗೆ ಕಿವಿಗೊಡದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವರು ದೇವರಾದ ಯೆಹೋವನನ್ನು ನಂಬದೆ ಆತನ ಆಜ್ಞೆಗಳಿಗೆ ಮಣಿಯದೆ ಇದ್ದ ತಮ್ಮ ಹಿರಿಯರಂತೆ ಆತನಿಗೆ ಕಿವಿಗೊಡದೆ ಹೋದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ, ಅಧ್ಯಾಯವನ್ನು ನೋಡಿ |
ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.
ನಾನು ನಿಮ್ಮ ಪೂರ್ವಿಕರಿಗೆ ‘ಪ್ರತಿ ಏಳು ವರ್ಷದ ಕೊನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಇಬ್ರಿಯ ಗುಲಾಮರನ್ನು ಬಿಡುಗಡೆ ಮಾಡಬೇಕು. ತನ್ನನ್ನು ನಿಮಗೆ ಮಾರಿಕೊಂಡ ಇಬ್ರಿಯ ಸಹೋದರ ನಿಮ್ಮಲ್ಲಿದ್ದರೆ ಅವನು ಆರು ವರ್ಷ ಸೇವೆಮಾಡಿದ ನಂತರ ಅವನನ್ನು ಬಿಡುಗಡೆ ಮಾಡಬೇಕು’ ಎಂದು ಹೇಳಿದ್ದೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕಿವಿಗೆ ಹಾಕಿಕೊಳ್ಳಲಿಲ್ಲ; ನನ್ನ ಕಡೆಗೆ ಗಮನ ಕೊಡಲಿಲ್ಲ.