2 ಅರಸುಗಳು 17:16 - ಪರಿಶುದ್ದ ಬೈಬಲ್16 ಜನರು ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನು ಅನುಸರಿಸುವುದನ್ನು ನಿಲ್ಲಿಸಿದರು. ಅವರು ಚಿನ್ನದ ಎರಡು ಬಸವನ ಮೂರ್ತಿಗಳನ್ನು ನಿರ್ಮಿಸಿದರು. ಅವರು ಅಶೇರ ಸ್ತಂಭಗಳನ್ನು ನಿರ್ಮಿಸಿದರು. ಅವರು ಪರಲೋಕದ ಎಲ್ಲಾ ನಕ್ಷತ್ರಗಳನ್ನು ಮತ್ತು ಬಾಳ್ ದೇವರನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವನಮೂರ್ತಿಗಳು, ಅಶೇರ ವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು. ಆಕಾಶಸೈನ್ಯ, ಬಾಳ್ ದೇವತೆ ಇವುಗಳನ್ನು ಪೂಜಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ಮೀರಿ ಎರಡು ಎರಕದ ಬಸವಮೂರ್ತಿಗಳು, ಅಶೇರವಿಗ್ರಹಸ್ತಂಭ ಇವುಗಳನ್ನು ಮಾಡಿಕೊಂಡರು; ಆಕಾಶಸೈನ್ಯ ಬಾಳ್‍ದೇವತೆ ಇವುಗಳನ್ನು ಪೂಜಿಸಿದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು. ಅಧ್ಯಾಯವನ್ನು ನೋಡಿ |
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
ನಾವು ಸ್ವರ್ಗದ ರಾಣಿಗೆ ನೈವೇದ್ಯವನ್ನು ಅರ್ಪಿಸುವದಾಗಿ ಹರಕೆ ಮಾಡಿದ್ದೇವೆ ಮತ್ತು ನಮ್ಮ ಹರಕೆಗಳನ್ನೆಲ್ಲ ಪೂರೈಸುತ್ತೇವೆ. ನಾವು ನೈವೇದ್ಯವನ್ನು ಕೊಡುತ್ತೇವೆ ಮತ್ತು ಅವಳ ಪೂಜೆಗಾಗಿ ಪಾನನೈವೇದ್ಯವನ್ನು ಅರ್ಪಿಸುತ್ತೇವೆ. ನಾವು ಮೊದಲು ಹಾಗೆಯೇ ಮಾಡಿದ್ದೇವೆ. ನಮ್ಮ ಪೂರ್ವಿಕರು, ನಮ್ಮ ರಾಜರು, ನಮ್ಮ ಅಧಿಕಾರಿಗಳು ಮೊದಲು ಮಾಡಿದಂತೆಯೇ ನಾವೆಲ್ಲರೂ ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಪಟ್ಟಣಗಳಲ್ಲಿ ಮಾಡಿದ್ದೆವು. ನಾವು ಸ್ವರ್ಗದ ರಾಣಿಯನ್ನು ಪೂಜಿಸುವ ಕಾಲದಲ್ಲಿ ನಮ್ಮಲ್ಲಿ ಸಾಕಷ್ಟು ಆಹಾರವಿತ್ತು. ನಾವು ಜಯಶೀಲರಾಗಿದ್ದೆವು. ನಮಗೆ ಕೆಟ್ಟದ್ದೇನೂ ಆಗಿರಲಿಲ್ಲ.