17 ಅವರು ತಮ್ಮ ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು. ಅವರು ಭವಿಷ್ಯವನ್ನು ತಿಳಿಯಲು ಮಾಂತ್ರಿಕ ವಿದ್ಯೆಯನ್ನು ಮತ್ತು ಕಣಿಹೇಳುವುದನ್ನು ಕಲಿತರು. ಯೆಹೋವನು ಕೆಟ್ಟದ್ದೆಂದು ಹೇಳಿದ್ದಕ್ಕೆ ತಮ್ಮನ್ನು ತಾವು ಮಾರಿಕೊಂಡು ಯೆಹೋವನಿಗೆ ಕೋಪವನ್ನು ಉಂಟುಮಾಡಿದರು.
17 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.
17 ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.
17 ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.
ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.
ಅಹಾಜನು ಇಸ್ರೇಲಿನ ರಾಜರುಗಳಂತೆ ಜೀವಿಸಿದನು. ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಆಹುತಿಕೊಟ್ಟನು. ಇಸ್ರೇಲರು ದೇಶಕ್ಕೆ ಬಂದ ಕಾಲದಲ್ಲಿ ಯೆಹೋವನು ಬಲಾತ್ಕಾರದಿಂದ ಓಡಿಸಿದ ಜನಾಂಗಗಳ ಅಸಹ್ಯ ಪಾಪಗಳನ್ನು ಅವನು ಅನುಸರಿಸಿದನು.
ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.
ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.
ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.
ಒಂದು ಸಲ, ನಾವು ಪ್ರಾರ್ಥನಾಸ್ಥಳಕ್ಕೆ ಹೋಗುತ್ತಿದ್ದಾಗ ಒಂದು ಸಂಗತಿ ಸಂಭವಿಸಿತು. ದಾಸಿಯೊಬ್ಬಳು ನಮ್ಮನ್ನು ಎದುರುಗೊಂಡಳು. ಆಕೆಯಲ್ಲಿ ವಿಶೇಷವಾದ ಆತ್ಮವಿತ್ತು. ಆ ಆತ್ಮದ ಶಕ್ತಿಯಿಂದ ಅವಳು ಮುಂದೆ ಸಂಭವಿಸುವ ಸಂಗತಿಗಳ ಬಗ್ಗೆ ಹೇಳುತ್ತಿದ್ದಳು. ಇದರ ಮೂಲಕವಾಗಿ ಆಕೆ ತನ್ನ ಯಜಮಾನರಿಗೆ ಬಹಳ ಹಣವನ್ನು ಗಳಿಸಿ ಕೊಡುತ್ತಿದ್ದಳು.
ನೀವು ಅವುಗಳಿಗೆ ಅದೇ ರೀತಿಯ ಕಾಣಿಕೆಗಳನ್ನರ್ಪಿಸುತ್ತೀರಿ. ಆ ಸುಳ್ಳು ದೇವರುಗಳಿಗೆ ನೀವು ನಿಮ್ಮ ಮಕ್ಕಳನ್ನು ಬೆಂಕಿಯ ಮೂಲಕ ಆಹುತಿ ಮಾಡುತ್ತೀರಿ. ಈ ಹೊತ್ತಿನ ದಿನದ ತನಕವೂ ಆ ಹೊಲಸು ವಿಗ್ರಹಗಳ ಮೂಲಕ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳುತ್ತಿದ್ದೀರಿ. ನೀವು ನನ್ನ ಬಳಿಗೆ ಬಂದು ನನ್ನ ಸಲಹೆಗಳನ್ನು ಕೇಳಲು ನಿಮ್ಮನ್ನು ನಾನು ಸ್ವಾಗತಿಸಬೇಕೋ? ನಾನು ಒಡೆಯನಾದ ಯೆಹೋವನು. ನನ್ನ ಜೀವದಾಣೆ, ನಾನು ನಿಮಗೆ ಉತ್ತರಿಸುವುದಿಲ್ಲ; ನಿಮಗೆ ಸಲಹೆಗಳನ್ನೂ ಕೊಡುವದಿಲ್ಲ.
ಅವರು ತಮ್ಮ ಕಾಣಿಕೆಗಳಿಂದ ತಮ್ಮನ್ನೆ ಹೊಲಸು ಮಾಡಿಕೊಳ್ಳಲು ಅವರನ್ನು ಬಿಟ್ಟುಕೊಟ್ಟೆನು. ಅವರು ತಮ್ಮ ವಿಗ್ರಹಗಳಿಗೆ ತಮ್ಮ ಸ್ವಂತ ಚೊಚ್ಚಲು ಗಂಡುಮಕ್ಕಳನ್ನು ಆಹುತಿಕೊಡಲು ಪ್ರಾರಂಭಿಸಿದರು. ಈ ರೀತಿಯಾಗಿ ನಾನು ಆ ಜನರನ್ನು ನಾಶಮಾಡುವೆನು. ಆಗ ಅವರು ನಾನು ಒಡೆಯನಾದ ಯೆಹೋವನೆಂದು ತಿಳಿದುಕೊಳ್ಳುವರು.’
ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು.
ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.
ಒಂದೇ ದಿನದೊಳಗೆ, ಒಂದೇ ಕ್ಷಣದಲ್ಲಿ ನಿನಗೆ ಎರಡು ಸಂಗತಿಗಳು ಸಂಭವಿಸುತ್ತವೆ. ನೀನು ನಿನ್ನ ಮಕ್ಕಳನ್ನು ಕಳೆದುಕೊಳ್ಳುವೆ, ಆ ಬಳಿಕ ನೀನು ನಿನ್ನ ಗಂಡನನ್ನು ಕಳಕೊಳ್ಳುವೆ. ಹೌದು, ಈ ವಿಷಯಗಳು ನಿನಗೆ ಖಂಡಿತವಾಗಿ ಸಂಭವಿಸುವವು. ನಿನ್ನಲ್ಲಿರುವ ಎಲ್ಲಾ ಮಾಟಮಂತ್ರಗಳು ನಿನ್ನನ್ನು ಕಾಪಾಡಲಾರವು.
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”
ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.
ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.
ಇಸ್ರೇಲರು ಪೂಜಾಸ್ಥಳಗಳಲ್ಲೆಲ್ಲಾ ಧೂಪವನ್ನು ಸುಡುತ್ತಿದ್ದರು. ಯೆಹೋವನು ಆ ದೇಶದಿಂದ ಬಲವಂತವಾಗಿ ಹೊರಗಟ್ಟಿದ ಆ ಮೊದಲಿನ ಜನಾಂಗಗಳಂತೆ ಇಸ್ರೇಲರು ಮಾಡಿದರು. ಇಸ್ರೇಲರು ಮಾಡಿದ ದುಷ್ಕೃತ್ಯಗಳಿಂದ ಯೆಹೋವನು ಕೋಪಗೊಂಡನು.
“ನೀವು ಹೋಗುವ ದೇಶದಲ್ಲಿ ಬಹಳ ವರ್ಷ ಬಾಳಿದ ನಂತರ ನಿಮಗೆ ಮಕ್ಕಳೂ ಮೊಮ್ಮಕ್ಕಳೂ ಆಗುವರು. ಬಳಿಕ ನೀವು ನಿಮ್ಮ ಜೀವಿತಗಳನ್ನು ಹಾಳುಮಾಡಿಕೊಳ್ಳುವಿರಿ. ನೀವು ಎಲ್ಲಾ ಬಗೆಯ ವಿಗ್ರಹಗಳನ್ನು ಮಾಡಿಕೊಳ್ಳುವಿರಿ. ಅದು ದೇವರಿಗೆ ಬಹಳ ಕೋಪವನ್ನು ಉಂಟುಮಾಡುವುದು!
ಅವ್ವೀಯರು ಸುಳ್ಳುದೇವತೆಯಾದ ನಿಭಜ್ ಮತ್ತು ತರ್ತಕ್‌ಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ದೇವರುಗಳಾದ ಅದ್ರಮ್ಮೆಲೆಕ್ ಮತ್ತು ಅನ್ನಮ್ಮೆಲೆಕ್‌ಗಳನ್ನು ಗೌರವಿಸಲು ತಮ್ಮ ಮಕ್ಕಳನ್ನು ಬೆಂಕಿಯಲ್ಲಿ ಆಹುತಿಕೊಟ್ಟರು.
ಯೆಹೂದದ ಜನರು ಬೆನ್‌ಹಿನ್ನೊಮ್ ತಗ್ಗಿನಲ್ಲಿ ತೋಫೆತೆಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ಆ ಸ್ಥಳಗಳಲ್ಲಿ ಜನರು ತಮ್ಮ ಗಂಡು ಮತ್ತು ಹೆಣ್ಣುಮಕ್ಕಳನ್ನು ಕೊಂದು ಯಜ್ಞದ ಆಹುತಿಯೆಂದು ಅವರನ್ನು ಸುಡುತ್ತಾರೆ. ನೀವು ಹೀಗೆ ಮಾಡಬೇಕೆಂದು ನಾನೆಂದೂ ಹೇಳಿಲ್ಲ. ಇಂಥ ವಿಚಾರಗಳು ನನ್ನ ಮನಸ್ಸಿನಲ್ಲಿಯೂ ಬಂದಿಲ್ಲ.
ಯೆಹೂದದ ರಾಜರು ಬಾಳ್ ದೇವರಿಗಾಗಿ ಉನ್ನತವಾದ ಸ್ಥಳಗಳನ್ನು ಕಟ್ಟಿಸಿದರು. ಅವರು ಆ ಸ್ಥಳಗಳಲ್ಲಿ ತಮ್ಮ ಗಂಡುಮಕ್ಕಳನ್ನು ಹೋಮಮಾಡಿದರು. ಅವರು ಬಾಳ್ ದೇವರಿಗೆ ತಮ್ಮ ಗಂಡುಮಕ್ಕಳನ್ನು ಆಹುತಿಕೊಟ್ಟರು. ನಾನು ಹಾಗೆ ಮಾಡಲು ಅವರಿಗೆ ಹೇಳಿರಲಿಲ್ಲ. ನಿಮ್ಮ ಗಂಡುಮಕ್ಕಳನ್ನು ಆಹುತಿಯಾಗಿ ಕೊಡಿ ಎಂದು ನಿಮಗೆ ಹೇಳಲಿಲ್ಲ. ಅಂಥ ವಿಚಾರ ನನ್ನ ಮನಸ್ಸಿನಲ್ಲಿ ಬರಲೇ ಇಲ್ಲ.
ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.