2 ಅರಸುಗಳು 17:23 - ಪರಿಶುದ್ದ ಬೈಬಲ್23 ಯೆಹೋವನು ಇಸ್ರೇಲನ್ನು ತನ್ನ ದೃಷ್ಟಿಯಿಂದ ದೂರ ತಳ್ಳುವವರೆಗೆ, ಅವರು ಈ ಪಾಪಗಳನ್ನು ಮಾಡುವುದನ್ನು ನಿಲ್ಲಿಸಲೇ ಇಲ್ಲ. ಇದು ಸಂಭವಿಸುತ್ತದೆಂದು ಯೆಹೋವನು ಹೇಳಿದ್ದನು! ಆತನು ಜನರಿಗೆ ಇದನ್ನು ಮುಂಚೆಯೇ ತಿಳಿಸಲು ತನ್ನ ಪ್ರವಾದಿಗಳನ್ನು ಕಳುಹಿಸಿದ್ದನು. ಆದ್ದರಿಂದಲೇ ಇಸ್ರೇಲರನ್ನು ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಹಿಡಿದು ಒಯ್ದರು. ಅವರು ಇಂದಿಗೂ ಅಲ್ಲಿಯೇ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ದುರ್ಮಾರ್ಗದಲ್ಲಿ ನಡೆಯುವದನ್ನು ಬಿಡಲಿಲ್ಲವಾದದರಿಂದ ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ. ಅಧ್ಯಾಯವನ್ನು ನೋಡಿ |
ಇಸ್ರೇಲ್ ಮತ್ತು ಯೆಹೂದಗಳನ್ನು ಎಚ್ಚರಿಸಲು ಯೆಹೋವನು ಪ್ರತಿಯೊಬ್ಬ ಪ್ರವಾದಿಯನ್ನು ಮತ್ತು ದೇವದರ್ಶಿಯನ್ನು ಬಳಸಿಕೊಂಡನು. ಯೆಹೋವನು, “ನಿಮ್ಮ ಕೆಟ್ಟಕಾರ್ಯಗಳಿಂದ ದೂರವಾಗಿ! ನನ್ನ ಆಜ್ಞೆಗಳಿಗೆ ಮತ್ತು ಧರ್ಮಶಾಸ್ತ್ರಗಳಿಗೆ ವಿಧೇಯತೆಯಿಂದಿರಿ. ನಿಮ್ಮ ಪೂರ್ವಿಕರಿಗೆ ನಾನು ನೀಡಿದ ಕಟ್ಟಳೆಗಳನ್ನೆಲ್ಲಾ ಅನುಸರಿಸಿ. ನಾನು ನನ್ನ ಸೇವಕರಾದ ಪ್ರವಾದಿಗಳ ಮೂಲಕ ಇವುಗಳನ್ನು ನೀಡಿದ್ದೇನೆ” ಎಂದು ಹೇಳಿದ್ದನು.
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.