2 ಅರಸುಗಳು 17:24 - ಪರಿಶುದ್ದ ಬೈಬಲ್24 ಇಸ್ರೇಲರನ್ನು ಸಮಾರ್ಯದಿಂದ ಅಶ್ಶೂರದ ರಾಜನು ಒಯ್ದನು. ನಂತರ ಅಶ್ಶೂರದ ರಾಜನು ಬಾಬಿಲೋನ್, ಕೂತಾ, ಅವ್ವಾ, ಹಮಾತ್ ಮತ್ತು ಸೆಫರ್ವಯಿಮ್‌ಗಳಿಂದ ಜನರನ್ನು ಕರೆತಂದು ಇಸ್ರೇಲರ ಬದಲಾಗಿ ಅವರನ್ನು ಸಮಾರ್ಯದಲ್ಲಿ ನೆಲೆಗೊಳಿಸಿದನು. ಅವರು ಸಮಾರ್ಯವನ್ನು ಹೊಂದಿಕೊಂಡು ಅವರ ಸುತ್ತಲಿನ ನಗರಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲ್ಯರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರ್ಯದೇಶವನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿ |
ರಾಜನಾದ ಸೊಲೊಮೋನನು ಮತ್ತು ಇಸ್ರೇಲಿನ ಜನರೆಲ್ಲರು ವಿಶ್ರಾಂತಿ ಹಬ್ಬವನ್ನು ಆಚರಿಸಿದರು. ಉತ್ತರದಲ್ಲಿದ್ದ ಹಮಾತ್ ದಾರಿಯಿಂದ ದಕ್ಷಿಣದ ಈಜಿಪ್ಟಿನ ಗಡಿಯವರೆಗಿನ ಎಲ್ಲ ಇಸ್ರೇಲರು ಅಲ್ಲಿದ್ದರು. ಅವರೆಲ್ಲರೂ ಒಟ್ಟಾಗಿ ಏಳು ದಿನಗಳ ಕಾಲ ಯೆಹೋವನ ಮುಂದೆ ತಿಂದು, ಕುಡಿದು ಆನಂದಿಸಿದರು. ಆಗ ಅವರು ಮತ್ತೆ ಏಳು ದಿನಗಳು ಅಲ್ಲಿಯೇ ಉಳಿದರು. ಅವರು ಒಟ್ಟಿಗೆ ಹದಿನಾಲ್ಕು ದಿನಗಳು ಹಬ್ಬವನ್ನು ಆಚರಿಸಿದರು!
ಪಷ್ಹೂರ ಮತ್ತು ಚೆಫನ್ಯರು ಹೀಗೆಂದರು: “ನಮಗೋಸ್ಕರ ಯೆಹೋವನನ್ನು ಪ್ರಾರ್ಥಿಸಿ ಮುಂದೆ ಸಂಭವಿಸುವುದನ್ನು ವಿಚಾರಿಸು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿರುವನು; ಆದ್ದರಿಂದ ಮುಂದೆ ಸಂಭವಿಸುವುದನ್ನು ನಾವು ತಿಳಿಯ ಬಯಸುತ್ತೇವೆ. ಮೊದಲಿನಂತೆ ಯೆಹೋವನು ನಮಗೋಸ್ಕರ ಅದ್ಭುತಗಳನ್ನೂ ಮಾಡಬಹುದು. ನೆಬೂಕದ್ನೆಚ್ಚರನು ನಮ್ಮ ಮೇಲೆ ಧಾಳಿ ಮಾಡುವುದನ್ನು ನಿಲ್ಲಿಸಿ ಹೊರಟುಹೋಗುವಂತೆ ಆತನು ಮಾಡಬಹುದು.”