Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:25 - ಪರಿಶುದ್ದ ಬೈಬಲ್‌

25 ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲ. ಆದುದರಿಂದ ಆತನು ಸಿಂಹಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರಿಗೆ ಆರಂಭದಲ್ಲಿ ಯೆಹೋವನ ಭಯಭಕ್ತಿ ಇರಲಿಲ್ಲವಾದದರಿಂದ ಆತನು ಸಿಂಹಗಳನ್ನು ಕಳುಹಿಸಿದನು; ಅವು ಅವರಲ್ಲಿ ಅನೇಕರನ್ನು ಕೊಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:25
18 ತಿಳಿವುಗಳ ಹೋಲಿಕೆ  

ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ.


ಇಂದಿಗೂ ಸಹ ಅವರು ಪೂರ್ವಕಾಲದಲ್ಲಿ ಮಾಡುತ್ತಿದ್ದಂತೆಯೇ ಜೀವಿಸುತ್ತಿದ್ದಾರೆ. ಅವರಿಗೆ ಯೆಹೋವನಲ್ಲಿ ಭಕ್ತಿಯಿಲ್ಲ. ಅವರು ಇಸ್ರೇಲರ ನಿಯಮಗಳಿಗೆ ಮತ್ತು ಆಜ್ಞೆಗಳಿಗೆ ವಿಧೇಯರಾಗುವುದಿಲ್ಲ. ಯೆಹೋವನು ಯಾಕೋಬನ ಸಂತತಿಗೆ ನೀಡಿದ ನಿಯಮಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸುವುದಿಲ್ಲ.


ಆದರೆ ಅವರು ಯೆಹೋವನಲ್ಲಿಯೂ ಭಕ್ತಿಯನ್ನಿಟ್ಟಿದ್ದರು. ಅವರು ಉನ್ನತಸ್ಥಳಗಳಿಗೆ ಯಾಜಕರನ್ನು ಜನರಲ್ಲಿಯೇ ಆಯ್ಕೆ ಮಾಡಿಕೊಂಡರು. ಆ ಯಾಜಕರು ಜನರಿಗಾಗಿ ಉನ್ನತಸ್ಥಳಗಳಲ್ಲಿನ ದೇವಾಲಯಗಳಲ್ಲಿ ಯಜ್ಞವನ್ನು ಅರ್ಪಿಸಿದರು.


ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.


ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.


ನಾನು ಅವರ ವಿರುದ್ಧ ನಾಲ್ಕು ರೀತಿಯ ವಿನಾಶಕರನ್ನು ಕಳುಹಿಸುತ್ತೇನೆ.’ ಇದು ಯೆಹೋವನ ನುಡಿ. ‘ಅವರನ್ನು ಕೊಲೆಮಾಡಲು ಖಡ್ಗಧಾರಿಗಳಾದ ಶತ್ರುಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ಎಳೆದುಕೊಂಡು ಹೋಗುವುದಕ್ಕಾಗಿ ನಾಯಿಗಳನ್ನು ಕಳುಹಿಸುತ್ತೇನೆ. ಅವರ ದೇಹಗಳನ್ನು ತಿನ್ನಲು ಮತ್ತು ನಾಶಮಾಡಲು ಗಾಳಿಯಲ್ಲಿ ಹಾರಾಡುವ ಪಕ್ಷಿಗಳನ್ನೂ ಕಾಡುಪ್ರಾಣಿಗಳನ್ನೂ ಕಳುಹಿಸುತ್ತೇನೆ.


ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.


ಆದ್ದರಿಂದ ಕಾಡಿನ ಸಿಂಹವು ಅವರ ಮೇಲೆರಗುವುದು, ಮರಳುಗಾಡಿನ ತೋಳವು ಅವರನ್ನು ಕೊಂದು ಬಿಡುವದು. ಅವರ ನಗರಗಳ ಹತ್ತಿರ ಚಿರತೆಯು ಅಡಗಿಕೊಂಡಿದೆ. ನಗರದಿಂದ ಹೊರಗೆ ಬಂದವರನ್ನೆಲ್ಲ ಅದು ಚೂರುಚೂರು ಮಾಡುವುದು. ಯೆಹೂದದ ಜನರು ಮತ್ತೆಮತ್ತೆ ಪಾಪಗಳನ್ನು ಮಾಡಿದ್ದರಿಂದ ಹೀಗಾಗುವದು. ಅವರು ಅನೇಕಸಲ ಯೆಹೋವನಿಂದ ದೂರ ಹೋಗಿದ್ದಾರೆ.


ಹೀಗೆ ಅಶ್ಶೂರದವರು ಸಮಾರ್ಯದಿಂದ ಕರೆದೊಯ್ದಿದ್ದ ಯಾಜಕರಲ್ಲೊಬ್ಬನು ಬೇತೇಲಿನಲ್ಲಿ ವಾಸಿಸಲು ಬಂದನು. ಈ ಯಾಜಕನು ಜನರಿಗೆ, ಯೆಹೋವ ಭಕ್ತಿಯನ್ನು ಬೋಧಿಸಿದನು.


ಎಲೀಷನು ಹಿಂದಕ್ಕೆ ತಿರುಗಿ ಅವರನ್ನು ನೋಡಿ ಅವರಿಗೆ ಕೇಡಾಗುವಂತೆ ಯೆಹೋವನನ್ನು ಕೇಳಿಕೊಂಡನು. ಆಗ ಕಾಡಿನಿಂದ ಎರಡು ಕರಡಿಗಳು ಹೊರಗೆ ಬಂದು ಅವರ ಮೇಲೆರಗಿ ನಲವತ್ತೆರಡು ಮಂದಿ ಬಾಲಕರನ್ನು ಸೀಳಿಹಾಕಿದವು.


ಆದ್ದರಿಂದ ಮೊದಲನೆಯ ಪ್ರವಾದಿಯು, “ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಈ ಸ್ಥಳವನ್ನು ಬಿಟ್ಟು ಹೊರಟಾಗ ನಿನ್ನನ್ನು ಒಂದು ಸಿಂಹವು ಕೊಂದುಹಾಕುತ್ತದೆ” ಎಂದು ಹೇಳಿದನು. ಎರಡನೆಯ ಪ್ರವಾದಿಯು ಆ ಸ್ಥಳವನ್ನು ಬಿಟ್ಟು ಹೊರಟಾಗ ಒಂದು ಸಿಂಹವು ಅವನನ್ನು ಕೊಂದುಹಾಕಿತು.


ಅವನು ತನ್ನ ಮನೆಗೆ ಹಿಂತಿರುಗಿ ಹೋಗುತ್ತಿರುವಾಗ ದಾರಿಯಲ್ಲಿ ಒಂದು ಸಿಂಹವು ಅವನ ಮೇಲೆರಗಿ ಅವನನ್ನು ಕೊಂದುಹಾಕಿತು. ಪ್ರವಾದಿಯ ದೇಹವು ರಸ್ತೆಯ ಮೇಲೆ ಬಿದ್ದಿತ್ತು. ಕತ್ತೆ ಮತ್ತು ಸಿಂಹವು ಆ ದೇಹದ ಹತ್ತಿರ ನಿಂತಿದ್ದವು.


ದೇವರು ನಮಗೆ ಜೋರ್ಡನ್ ನದಿಯ ಮತ್ತೊಂದು ದಡದಲ್ಲಿ ಭೂಮಿಯನ್ನು ಕೊಟ್ಟಿದ್ದಾನೆ. ಅಂದರೆ ಜೋರ್ಡನ್ ನದಿಯು ನಮ್ಮನ್ನು ಬೇರ್ಪಡಿಸುತ್ತದೆ. ನಿಮ್ಮ ಮಕ್ಕಳು ದೊಡ್ಡವರಾಗಿ ನಿಮ್ಮ ಭೂಮಿಯನ್ನು ಆಳುವಾಗ, ನಾವು ನಿಮ್ಮ ಜನರೆಂಬುದನ್ನು ಮರೆತುಬಿಡಬಹುದು. ‘ರೂಬೇನ್ಯರು, ಗಾದ್ಯರು ಆದ ನೀವು ಇಸ್ರೇಲಿನ ಅಂಗವಾಗಿಲ್ಲ’ ಎಂದು ಹೇಳಿ ನಮ್ಮ ಮಕ್ಕಳು ಯೆಹೋವನನ್ನು ಆರಾಧಿಸದಂತೆ ನಿಮ್ಮ ಮಕ್ಕಳು ತಡೆಯಬಹುದು.


ನಿಮಗೆ ವಿರುದ್ಧವಾಗಿ ನಾನು ಕ್ರೂರ ಮೃಗಗಳನ್ನು ಕಳುಹಿಸುವೆನು. ಅವುಗಳು ನಿಮ್ಮ ಮಕ್ಕಳನ್ನು ತಿಂದು ಬಿಡುವವು; ನಿಮ್ಮ ಪಶುಗಳನ್ನು ನಾಶಮಾಡುವವು. ಅವು ನಿಮ್ಮಲ್ಲಿ ಅನೇಕ ಜನರನ್ನು ಕೊಲ್ಲುವವು. ದಾರಿಗಳು ಜನಸಂಚಾರವಿಲ್ಲದೆ ಬರಿದಾಗಿರುವವು.


ಅಶ್ಶೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ಆ ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ಆ ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು.


ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು