Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:26 - ಪರಿಶುದ್ದ ಬೈಬಲ್‌

26 ಅಶ್ಶೂರದ ರಾಜನಿಗೆ ಕೆಲವು ಜನರು, “ನೀನು ಕೆಲವು ಜನರನ್ನು ಒಯ್ದು ಸಮಾರ್ಯ ನಗರಗಳಲ್ಲಿ ಇರಿಸಿದೆ. ಅವರು ಆ ದೇಶದ ದೇವರ ನಿಯಮಗಳ ಬಗ್ಗೆ ತಿಳಿದುಕೊಂಡಿಲ್ಲ. ಆದ್ದರಿಂದ ಅವರನ್ನು ಆಕ್ರಮಣಮಾಡಲು ದೇವರು ಸಿಂಹಗಳನ್ನು ಕಳುಹಿಸಿದನು. ಆ ದೇಶದ ದೇವರ ನಿಯಮಗಳನ್ನು ಅವರು ತಿಳಿದಿಲ್ಲದಿರುವುದರಿಂದ ಅವರನ್ನು ಸಿಂಹಗಳು ಕೊಂದುಹಾಕಿದವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ, “ನೀನು ಸಮಾರ್ಯ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿದ್ದಾನೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಸ್ಸೀರಿಯದ ರಾಜನ ಸೇವಕರು ಅವನಿಗೆ, “ನೀವು ಸಮಾರಿಯಾ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು, ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಶ್ಶೂರದ ಅರಸನ ಸೇವಕರು ತಮ್ಮ ಅರಸನಿಗೆ - ನೀನು ಸಮಾರ್ಯಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು ಆ ದೇಶದ ದೇವರಿಗೆ ನಡೆಯತಕ್ಕ ರೀತಿಯನ್ನು ಅರಿಯದವರಾಗಿದ್ದಾರೆ. ಆದದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ಸೇವಕರು ಅಸ್ಸೀರಿಯದ ಅರಸನಿಗೆ, “ನೀನು ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನರು ಆ ದೇಶದ ದೇವರು ಅಪೇಕ್ಷಿಸುವುದನ್ನು ತಿಳಿಯದೆ ಇದ್ದಾರೆ. ಆದುದರಿಂದ, ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾರೆ. ಅವು ಅವರನ್ನು ಕೊಂದುಹಾಕುತ್ತವೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:26
5 ತಿಳಿವುಗಳ ಹೋಲಿಕೆ  

ಆ ಜನರು ಸಮಾರ್ಯದ ಪಾಪದ ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”


ಆದ್ದರಿಂದ ಅಶ್ಶೂರದ ರಾಜನು, “ನೀವು ಸಮಾರ್ಯದಿಂದ ಕೆಲವು ಯಾಜಕರನ್ನು ಕರೆದೊಯ್ದಿರುವಿರಿ. ನಾನು ಸಮಾರ್ಯದಿಂದ ಸೆರೆಹಿಡಿದು ತಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿ. ಆ ಯಾಜಕನು ಹೋಗಿ ಅಲ್ಲಿಯೇ ನೆಲೆಸಲಿ. ನಂತರ ಆ ಯಾಜಕನ ಆ ದೇಶದ ದೇವರ ಕಟ್ಟಳೆಗಳನ್ನು ಜನರಿಗೆ ಬೋಧಿಸಲಿ” ಎಂದು ಆಜ್ಞಾಪಿಸಿದನು.


ಸಮುವೇಲನು ಜನರಿಗೆ ರಾಜನೀತಿಯ ನಿಯಮಗಳನ್ನು ವಿವರಿಸಿದನು. ಅವನು ಒಂದು ಪುಸ್ತಕದಲ್ಲಿ ಆ ನಿಯಮಗಳನ್ನು ಬರೆದನು. ಅವನು ಯೆಹೋವನ ಸನ್ನಿಧಿಯಲ್ಲಿ ಆ ಪುಸ್ತಕವನ್ನಿಟ್ಟನು. ಬಳಿಕ ಸಮುವೇಲನು ಜನರನ್ನು ಮನೆಗಳಿಗೆ ಹಿಂದಿರುಗಲು ಹೇಳಿದನು.


ಆದ್ದರಿಂದ ಜನರ ಮಾತಿಗೆ ಕಿವಿಗೊಟ್ಟು ಅವರು ಹೇಳಿದಂತೆ ಮಾಡು. ಆದರೆ ಅವರಿಗೆ ಎಚ್ಚರಿಕೆಕೊಡು. ರಾಜನಾದವನು ಜನರಿಗೆ ಏನು ಮಾಡುತ್ತಾನೆ ಎಂಬುದನ್ನು ಅವರಿಗೆ ತಿಳಿಸಿ ಹೇಳು! ರಾಜನಾದವನು ಜನರನ್ನು ಹೇಗೆ ಆಳುತ್ತಾನೆಂಬುದನ್ನೂ ಅವರಿಗೆ ತಿಳಿಸಿಕೊಡು” ಎಂದು ಹೇಳಿದನು.


ಆದರೆ ಅವರು ಯೆಹೋವನನ್ನು ಗೌರವಿಸಲಿಲ್ಲ. ಆದ್ದರಿಂದ ಅವರ ಮೇಲೆ ಆಕ್ರಮಣಮಾಡಲು ಯೆಹೋವನು ಸಿಂಹಗಳನ್ನು ಕಳುಹಿಸಿದನು. ಈ ಸಿಂಹಗಳು ಆ ಜನರಲ್ಲಿ ಕೆಲವರನ್ನು ಕೊಂದುಹಾಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು